ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; [QBR] ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು. [QBR]
2. ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; [QBR] ಇದನ್ನು ದೀನರು ಕೇಳಿ ಸಂತೋಷಿಸುವರು. [QBR]
3. ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; [QBR] ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ. [QBR]
4. ನಾನು ಯೆಹೋವನ ಸನ್ನಿಧಿಯಲ್ಲಿ [* ಅಥವಾ ಹುಡುಕಿದೆನು.] ಬೇಡಿಕೊಳ್ಳಲು, [QBR] ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. [QBR]
5. ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; [QBR] ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ. [QBR]
6. ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, [QBR] ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು. [QBR]
7. ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, [QBR] ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ. [QBR]
8. ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; [QBR] ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು. [QBR]
9. ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; [QBR] ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ. [QBR]
10. ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; [QBR] ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ. [QBR]
11. ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; [QBR] ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು. [QBR]
12. ದೀರ್ಘಾಯುಷ್ಯವು ಬೇಕೋ? [QBR] ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ? [QBR]
13. ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; [QBR] ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ. [QBR]
14. ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; [QBR] ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು. [QBR]
15. ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; [QBR] ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ. [QBR]
16. ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; [QBR] ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು. [QBR]
17. ಯೆಹೋವನು ನೀತಿವಂತರ ಕೂಗನ್ನು ಕೇಳಿ, [QBR] ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ. [QBR]
18. ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; [QBR] ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ. [QBR]
19. ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, [QBR] ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ. [QBR]
20. ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; [QBR] ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ. [QBR]
21. ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; [QBR] ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು. [QBR]
22. ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. [QBR] ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 34 / 150
ಕೀರ್ತನೆಗಳು 34:8
1 ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು. 2 ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು. 3 ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ. 4 ನಾನು ಯೆಹೋವನ ಸನ್ನಿಧಿಯಲ್ಲಿ * ಅಥವಾ ಹುಡುಕಿದೆನು. ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. 5 ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ. 6 ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು. 7 ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ. 8 ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು. 9 ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ. 10 ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ. 11 ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು. 12 ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ? 13 ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ. 14 ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು. 15 ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ. 16 ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು. 17 ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ. 18 ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ. 19 ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ. 20 ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ. 21 ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು. 22 ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 34 / 150
Common Bible Languages
West Indian Languages
×

Alert

×

kannada Letters Keypad References