ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು; [QBR] ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು. [QBR]
2. ಖೇಡ್ಯ ಮತ್ತು ಗುರಾಣಿಯನ್ನು ಹಿಡಿದುಕೊಂಡು, [QBR] ನನಗೆ ಸಹಾಯಕನಾಗಿ ನಿಲ್ಲು. [QBR]
3. ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು, [QBR] ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು; [QBR] “ನಾನೇ ನಿನ್ನ ರಕ್ಷಣೆ” ಎಂದು ಅಭಯಕೊಡು. [QBR]
4. ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; [QBR] ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. [QBR]
5. ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; [QBR] ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ. [QBR]
6. ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ [QBR] ಯೆಹೋವನ ದೂತನು ಅವರನ್ನು ಹಿಂದಟ್ಟಲಿ. [QBR]
7. ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; [QBR] ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ. [QBR]
8. ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; [QBR] ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. [QBR] ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ. [QBR]
9. ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು; [QBR] ಆತನಿಂದಾದ ರಕ್ಷಣೆಯ ನಿಮಿತ್ತ ಆನಂದಪಡುವೆನು. [QBR]
10. ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, [QBR] ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, [QBR] “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು. [QBR]
11. ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; [QBR] ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ. [QBR]
12. ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; [QBR] ನಾನು ದಿಕ್ಕಿಲ್ಲದವನಾದೆನು. [QBR]
13. ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; [QBR] ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. [QBR] [* ಅಥವಾ ನನ್ನ ತಲೆಬಾಗಿ ಪ್ರಾರ್ಥಿಸಿದನು. ಅಥವಾ ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.] ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ. [QBR]
14. ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು; [QBR] ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು. [QBR]
15. ಆದರೂ ನನಗೆ ಆಪತ್ತು ಬಂದಾಗ, [QBR] ಅವರು ಸಂತೋಷಿಸುತ್ತಾ ಕೂಡಿಕೊಂಡರು; [QBR] ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು, [QBR] ಸೂರೆ ಮಾಡುವುದನ್ನು ಬಿಡಲೇ ಇಲ್ಲ. [QBR]
16. ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ, [QBR] ನನ್ನ ಮೇಲೆ ಹಲ್ಲುಕಡಿಯುತ್ತಾರೆ. [QBR]
17. ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ? [QBR] ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; [QBR] ನನ್ನ ಪರಮಪ್ರಿಯ ಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು. [QBR]
18. ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; [QBR] ಬಹುಜನರ ಮುಂದೆ ಸ್ತುತಿಸುವೆನು. [QBR]
19. ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; [QBR] ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ. [QBR]
20. ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; [QBR] ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ. [QBR]
21. ಅವರು ನನ್ನನ್ನು ನೋಡಿ ಬಾಯಿಕಿಸಿದು, “ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ” ಎಂದು ಅನ್ನುತ್ತಾರೆ. [QBR]
22. ಯೆಹೋವನೇ, ನೀನೇ ನೋಡಿದಿಯಲ್ಲವೇ; [QBR] ಸುಮ್ಮನಿರಬೇಡ; [QBR] ನನ್ನ ಒಡೆಯನೇ, ನನ್ನಿಂದ ದೂರವಾಗಿರುವುದೇಕೆ? [QBR]
23. ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; [QBR] ನನ್ನ ಕರ್ತನೇ, ಎಚ್ಚೆತ್ತು ನನ್ನ ವಿವಾದವನ್ನು ವಿಚಾರಿಸು. [QBR]
24. ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; [QBR] ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು. [QBR]
25. ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; [QBR] [† ಅಥವಾ ಅವನನ್ನು ನುಂಗಿಬಿಟ್ಟಿದ್ದೇವೆಂದು.] ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು. [QBR]
26. ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; [QBR] ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, [QBR] ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ. [QBR]
27. ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು [QBR] ಆನಂದದೊಡನೆ ಜಯಧ್ವನಿಮಾಡಲಿ; [QBR] ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ. [QBR]
28. ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 35 / 150
ಕೀರ್ತನೆಗಳು 35:114
1 ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು; ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು. 2 ಖೇಡ್ಯ ಮತ್ತು ಗುರಾಣಿಯನ್ನು ಹಿಡಿದುಕೊಂಡು, ನನಗೆ ಸಹಾಯಕನಾಗಿ ನಿಲ್ಲು. 3 ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು, ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು; “ನಾನೇ ನಿನ್ನ ರಕ್ಷಣೆ” ಎಂದು ಅಭಯಕೊಡು. 4 ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. 5 ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ. 6 ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ ಯೆಹೋವನ ದೂತನು ಅವರನ್ನು ಹಿಂದಟ್ಟಲಿ. 7 ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ. 8 ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ. 9 ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು; ಆತನಿಂದಾದ ರಕ್ಷಣೆಯ ನಿಮಿತ್ತ ಆನಂದಪಡುವೆನು. 10 ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು. 11 ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ. 12 ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು. 13 ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. * ಅಥವಾ ನನ್ನ ತಲೆಬಾಗಿ ಪ್ರಾರ್ಥಿಸಿದನು. ಅಥವಾ ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ. 14 ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು. 15 ಆದರೂ ನನಗೆ ಆಪತ್ತು ಬಂದಾಗ, ಅವರು ಸಂತೋಷಿಸುತ್ತಾ ಕೂಡಿಕೊಂಡರು; ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು, ಸೂರೆ ಮಾಡುವುದನ್ನು ಬಿಡಲೇ ಇಲ್ಲ. 16 ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ, ನನ್ನ ಮೇಲೆ ಹಲ್ಲುಕಡಿಯುತ್ತಾರೆ. 17 ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ? ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; ನನ್ನ ಪರಮಪ್ರಿಯ ಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು. 18 ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರ ಮುಂದೆ ಸ್ತುತಿಸುವೆನು. 19 ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ. 20 ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ. 21 ಅವರು ನನ್ನನ್ನು ನೋಡಿ ಬಾಯಿಕಿಸಿದು, “ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ” ಎಂದು ಅನ್ನುತ್ತಾರೆ. 22 ಯೆಹೋವನೇ, ನೀನೇ ನೋಡಿದಿಯಲ್ಲವೇ; ಸುಮ್ಮನಿರಬೇಡ; ನನ್ನ ಒಡೆಯನೇ, ನನ್ನಿಂದ ದೂರವಾಗಿರುವುದೇಕೆ? 23 ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; ನನ್ನ ಕರ್ತನೇ, ಎಚ್ಚೆತ್ತು ನನ್ನ ವಿವಾದವನ್ನು ವಿಚಾರಿಸು. 24 ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು. 25 ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; ಅಥವಾ ಅವನನ್ನು ನುಂಗಿಬಿಟ್ಟಿದ್ದೇವೆಂದು. ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು. 26 ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ. 27 ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು ಆನಂದದೊಡನೆ ಜಯಧ್ವನಿಮಾಡಲಿ; ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ. 28 ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 35 / 150
Common Bible Languages
West Indian Languages
×

Alert

×

kannada Letters Keypad References