ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ವೈರಿಗಳಿಂದ ಬಿಡಿಸಬೇಕೆಂಬ ವಿಜ್ಞಾಪನೆ }[PS]*ದಾವೀದನ ಕೀರ್ತನೆ. [BR]ಕೀರ್ತ 7 *[PE][QS]ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು; [QE][QS]ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು. [QE]
2. [QS]ಖೇಡ್ಯ ಮತ್ತು ಗುರಾಣಿಯನ್ನು ಹಿಡಿದುಕೊಂಡು, [QE][QS]ನನಗೆ ಸಹಾಯಕನಾಗಿ ನಿಲ್ಲು. [QE]
3. [QS]ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು, [QE][QS]ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು; [QE][QS]“ನಾನೇ ನಿನ್ನ ರಕ್ಷಣೆ” ಎಂದು ಅಭಯಕೊಡು. [QE]
4. [QS]ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; [QE][QS]ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. [QE]
5. [QS]ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; [QE][QS]ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ. [QE]
6. [QS]ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ [QE][QS]ಯೆಹೋವನ ದೂತನು ಅವರನ್ನು ಹಿಂದಟ್ಟಲಿ. [QE]
7. [QS]ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; [QE][QS]ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ. [QE]
8. [QS]ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; [QE][QS]ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. [QE][QS]ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ. [QE]
9. [QS]ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು; [QE][QS]ಆತನಿಂದಾದ ರಕ್ಷಣೆಯ ನಿಮಿತ್ತ ಆನಂದಪಡುವೆನು. [QE]
10. [QS]ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, [QE][QS]ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, [QE][QS]“ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು. [QE]
11. [QS]ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; [QE][QS]ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ. [QE]
12. [QS]ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; [QE][QS]ನಾನು ದಿಕ್ಕಿಲ್ಲದವನಾದೆನು. [QE]
13. [QS]ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; [QE][QS]ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. [QE][QS][* ಅಥವಾ ನನ್ನ ತಲೆಬಾಗಿ ಪ್ರಾರ್ಥಿಸಿದನು. ಅಥವಾ ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು. ]ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ. [QE]
14. [QS]ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು; [QE][QS]ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು. [QE]
15. [QS]ಆದರೂ ನನಗೆ ಆಪತ್ತು ಬಂದಾಗ, [QE][QS]ಅವರು ಸಂತೋಷಿಸುತ್ತಾ ಕೂಡಿಕೊಂಡರು; [QE][QS]ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು, [QE][QS]ಸೂರೆ ಮಾಡುವುದನ್ನು ಬಿಡಲೇ ಇಲ್ಲ. [QE]
16. [QS]ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ, [QE][QS]ನನ್ನ ಮೇಲೆ ಹಲ್ಲುಕಡಿಯುತ್ತಾರೆ. [QE]
17. [QS]ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ? [QE][QS]ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; [QE][QS]ನನ್ನ ಪರಮಪ್ರಿಯ ಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು. [QE]
18. [QS]ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; [QE][QS]ಬಹುಜನರ ಮುಂದೆ ಸ್ತುತಿಸುವೆನು. [QE]
19. [QS]ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; [QE][QS]ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ. [QE]
20. [QS]ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; [QE][QS]ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ. [QE]
21. [QS]ಅವರು ನನ್ನನ್ನು ನೋಡಿ ಬಾಯಿಕಿಸಿದು, “ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ” ಎಂದು ಅನ್ನುತ್ತಾರೆ. [QE]
22. [QS]ಯೆಹೋವನೇ, ನೀನೇ ನೋಡಿದಿಯಲ್ಲವೇ; [QE][QS]ಸುಮ್ಮನಿರಬೇಡ; [QE][QS]ನನ್ನ ಒಡೆಯನೇ, ನನ್ನಿಂದ ದೂರವಾಗಿರುವುದೇಕೆ? [QE]
23. [QS]ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; [QE][QS]ನನ್ನ ಕರ್ತನೇ, ಎಚ್ಚೆತ್ತು ನನ್ನ ವಿವಾದವನ್ನು ವಿಚಾರಿಸು. [QE]
24. [QS]ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; [QE][QS]ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು. [QE]
25. [QS]ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; [QE][QS][† ಅಥವಾ ಅವನನ್ನು ನುಂಗಿಬಿಟ್ಟಿದ್ದೇವೆಂದು. ]ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು. [QE]
26. [QS]ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; [QE][QS]ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, [QE][QS]ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ. [QE]
27. [QS]ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು [QE][QS]ಆನಂದದೊಡನೆ ಜಯಧ್ವನಿಮಾಡಲಿ; [QE][QS]ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ. [QE]
28. [QS]ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 35 / 150
ವೈರಿಗಳಿಂದ ಬಿಡಿಸಬೇಕೆಂಬ ವಿಜ್ಞಾಪನೆ 3 *ದಾವೀದನ ಕೀರ್ತನೆ.
ಕೀರ್ತ 7 *
ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು; ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು. 2 ಖೇಡ್ಯ ಮತ್ತು ಗುರಾಣಿಯನ್ನು ಹಿಡಿದುಕೊಂಡು, ನನಗೆ ಸಹಾಯಕನಾಗಿ ನಿಲ್ಲು. 3 ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು, ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು; “ನಾನೇ ನಿನ್ನ ರಕ್ಷಣೆ” ಎಂದು ಅಭಯಕೊಡು. 4 ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. 5 ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ. 6 ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ ಯೆಹೋವನ ದೂತನು ಅವರನ್ನು ಹಿಂದಟ್ಟಲಿ. 7 ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ. 8 ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ. 9 ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು; ಆತನಿಂದಾದ ರಕ್ಷಣೆಯ ನಿಮಿತ್ತ ಆನಂದಪಡುವೆನು. 10 ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು. 11 ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ. 12 ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು. 13 ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. * ಅಥವಾ ನನ್ನ ತಲೆಬಾಗಿ ಪ್ರಾರ್ಥಿಸಿದನು. ಅಥವಾ ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ. 14 ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು. 15 ಆದರೂ ನನಗೆ ಆಪತ್ತು ಬಂದಾಗ, ಅವರು ಸಂತೋಷಿಸುತ್ತಾ ಕೂಡಿಕೊಂಡರು; ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು, ಸೂರೆ ಮಾಡುವುದನ್ನು ಬಿಡಲೇ ಇಲ್ಲ. 16 ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ, ನನ್ನ ಮೇಲೆ ಹಲ್ಲುಕಡಿಯುತ್ತಾರೆ. 17 ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ? ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; ನನ್ನ ಪರಮಪ್ರಿಯ ಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು. 18 ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರ ಮುಂದೆ ಸ್ತುತಿಸುವೆನು. 19 ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ. 20 ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ. 21 ಅವರು ನನ್ನನ್ನು ನೋಡಿ ಬಾಯಿಕಿಸಿದು, “ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ” ಎಂದು ಅನ್ನುತ್ತಾರೆ. 22 ಯೆಹೋವನೇ, ನೀನೇ ನೋಡಿದಿಯಲ್ಲವೇ; ಸುಮ್ಮನಿರಬೇಡ; ನನ್ನ ಒಡೆಯನೇ, ನನ್ನಿಂದ ದೂರವಾಗಿರುವುದೇಕೆ? 23 ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; ನನ್ನ ಕರ್ತನೇ, ಎಚ್ಚೆತ್ತು ನನ್ನ ವಿವಾದವನ್ನು ವಿಚಾರಿಸು. 24 ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು. 25 ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; ಅಥವಾ ಅವನನ್ನು ನುಂಗಿಬಿಟ್ಟಿದ್ದೇವೆಂದು. ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು. 26 ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ. 27 ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು ಆನಂದದೊಡನೆ ಜಯಧ್ವನಿಮಾಡಲಿ; ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ. 28 ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 35 / 150
×

Alert

×

Kannada Letters Keypad References