3. ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು,
ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು; “ನಾನೇ ನಿನ್ನ ರಕ್ಷಣೆ” ಎಂದು ಅಭಯಕೊಡು. |
4. ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ;
ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. |
7. ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ;
ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ. |
8. ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ;
ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ. |
10. ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ,
ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು. |
11. ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ;
ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ. |
13. ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು;
ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. * ಅಥವಾ ನನ್ನ ತಲೆಬಾಗಿ ಪ್ರಾರ್ಥಿಸಿದನು. ಅಥವಾ ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ. |
14. ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು;
ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು. |
15. ಆದರೂ ನನಗೆ ಆಪತ್ತು ಬಂದಾಗ,
ಅವರು ಸಂತೋಷಿಸುತ್ತಾ ಕೂಡಿಕೊಂಡರು; ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು, ಸೂರೆ ಮಾಡುವುದನ್ನು ಬಿಡಲೇ ಇಲ್ಲ. |
17. ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ?
ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; ನನ್ನ ಪರಮಪ್ರಿಯ ಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು. |
19. ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ;
ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ. |
24. ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು;
ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು. |
25. ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು;
† ಅಥವಾ ಅವನನ್ನು ನುಂಗಿಬಿಟ್ಟಿದ್ದೇವೆಂದು. ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು. |
26. ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ;
ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ. |
27. ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು
ಆನಂದದೊಡನೆ ಜಯಧ್ವನಿಮಾಡಲಿ; ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ. |