ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ [QBR] ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ. [QBR]
2. ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು [QBR] ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ. [QBR]
3. ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; [QBR] ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ. [QBR]
4. ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; [QBR] ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ. [QBR]
5. ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; [QBR] ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ. [QBR]
6. ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, [QBR] ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; [QBR] ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ. [QBR]
7. ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; [QBR] ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ. [QBR]
8. ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; [QBR] ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ. [QBR]
9. ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; [QBR] ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ. [QBR]
10. ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; [QBR] ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು. [QBR]
11. ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ; [QBR] ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು. [QBR]
12. ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ. [PE]

Notes

No Verse Added

Total 150 Chapters, Current Chapter 36 of Total Chapters 150
ಕೀರ್ತನೆಗಳು 36:143
1. ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ
ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.
2. ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು
ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ.
3. ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ;
ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.
4. ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು;
ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.
5. ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ;
ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.
6. ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ,
ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ;
ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.
7. ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು;
ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.
8. ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ;
ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.
9. ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ;
ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.
10. ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು;
ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.
11. ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ;
ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು.
12. ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ. PE
Total 150 Chapters, Current Chapter 36 of Total Chapters 150
×

Alert

×

kannada Letters Keypad References