ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ [QBR] ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ. [QBR]
2. ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು [QBR] ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ. [QBR]
3. ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; [QBR] ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ. [QBR]
4. ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; [QBR] ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ. [QBR]
5. ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; [QBR] ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ. [QBR]
6. ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, [QBR] ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; [QBR] ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ. [QBR]
7. ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; [QBR] ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ. [QBR]
8. ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; [QBR] ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ. [QBR]
9. ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; [QBR] ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ. [QBR]
10. ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; [QBR] ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು. [QBR]
11. ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ; [QBR] ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು. [QBR]
12. ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 36 / 150
ಕೀರ್ತನೆಗಳು 36:40
1 ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ. 2 ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ. 3 ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ. 4 ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ. 5 ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ. 6 ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ. 7 ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ. 8 ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ. 9 ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ. 10 ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು. 11 ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ; ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು. 12 ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 36 / 150
Common Bible Languages
West Indian Languages
×

Alert

×

kannada Letters Keypad References