1. ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; [QBR] ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ. [QBR]
2. ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; [QBR] ಹಸಿರು ಸಸಿಯಂತೆ ಬಾಡಿಹೋಗುವರು. [QBR]
3. ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; [QBR] ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು. [QBR]
4. ನೀನು ಯೆಹೋವನಲ್ಲಿ ಸಂತೋಷಿಸು; [QBR] ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು. [QBR]
5. ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; [QBR] ಆತನೇ ಅದನ್ನು ಸಾಗಿಸುವನು. [QBR]
6. ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, [QBR] ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು. [QBR]
7. ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; [QBR] ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ. [QBR]
8. ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. [QBR] ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು. [QBR]
9. ಕೆಡುಕರು ತೆಗೆದುಹಾಕಲ್ಪಡುವರು; [QBR] ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು. [QBR]
10. ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; [QBR] ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ. [QBR]
11. ಆದರೆ ದೀನರು ದೇಶವನ್ನು ಅನುಭವಿಸುವರು; [QBR] ಅವರು ಮಹಾಸೌಖ್ಯದಿಂದ ಆನಂದಿಸುವರು. [QBR]
12. ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; [QBR] ಅವನನ್ನು ನೋಡಿ ಹಲ್ಲುಕಡಿಯುತ್ತಾನೆ. [QBR]
13. ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ. [QBR]
14. ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; [QBR] ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ. [QBR]
15. ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; [QBR] ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು; [QBR]
16. ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು. [QBR]
17. ದುಷ್ಟರ ತೋಳುಗಳು ಮುರಿದುಹೋಗುವವು; [QBR] ನೀತಿವಂತರನ್ನು ಯೆಹೋವನೇ ಉದ್ಧರಿಸುವನು. [QBR]
18. ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; [QBR] ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು. [QBR]
19. ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; [QBR] ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ. [QBR]
20. ದುಷ್ಟರೋ ನಾಶವಾಗಿ ಹೋಗುವರು; [QBR] ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. [QBR] ಅವರು ಹಬೆಯಂತೆ ತೋರಿ ಅಡಗಿಹೋಗುವರು. [QBR]
21. ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; [QBR] ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು. [QBR]
22. ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; [QBR] ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು. [QBR]
23. ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, [QBR] ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ. [QBR]
24. ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; [QBR] ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು. [QBR]
25. ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; [QBR] ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, [QBR] ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ. [QBR]
26. ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; [QBR] ಅವನ ಸಂತತಿಯವರು ಆಶೀರ್ವಾದ ಹೊಂದುವರು. [QBR]
27. ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; [QBR] ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ. [QBR]
28. ಯೆಹೋವನು ನ್ಯಾಯವನ್ನು ಮೆಚ್ಚುವವನು; [QBR] ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. [QBR] ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು. [QBR]
29. ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, [QBR] ಅದರಲ್ಲಿ ಶಾಶ್ವತವಾಗಿ ವಾಸಿಸುವರು. [QBR]
30. ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, [QBR] ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ. [QBR]
31. ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು; [QBR] ಅವನು ಜಾರುವುದೇ ಇಲ್ಲ. [QBR]
32. ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ. [QBR]
33. ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ; [QBR] ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ. [QBR]
34. ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; [QBR] ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; [QBR] ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ. [QBR]
35. ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ [* ಹಸಿರಾಗಿ ಬೆಳೆದ ಮರದಂತೆ ಅಂದರೆ ಲೆಬನೋನ್ ದೇಶದ ದೇವದಾರಿನಂತೆ.] [QBR] ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು. [QBR]
36. ತರುವಾಯ [† ಅಥವಾ ಅವನು.] ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, [QBR] ಅವನು ಇಲ್ಲದೆ ಹೋಗಿದ್ದನು, [QBR] ಅವನನ್ನು ಹುಡುಕಿದರೂ ಸಿಕ್ಕಲಿಲ್ಲ. [QBR]
37. ಒಳ್ಳೇ ನಡತೆಯುಳ್ಳವನನ್ನು ನೋಡು, [QBR] ಯಥಾರ್ಥನನ್ನು ಲಕ್ಷಿಸು; [QBR] ಶಾಂತನಿಗೆ ಸಂತಾನವೃದ್ಧಿ ಆಗುವುದು. [QBR]
38. ದ್ರೋಹಿಗಳೆಲ್ಲರೂ ನಾಶವಾಗುವರು; [QBR] ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು. [QBR]
39. ನೀತಿವಂತರ ರಕ್ಷಣೆ ಯೆಹೋವನಿಂದಲೇ; [QBR] ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ. [QBR]
40. ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; [QBR] ಅವರು ಆತನ ಆಶ್ರಿತರಾದುದರಿಂದ, [QBR] ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು. [PE]