ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಸದ್ಭಕ್ತರು ನಂಬಿಕೆಯಿಂದಲೇ ಜೀವಿಸಬೇಕೆಂದು ಬೋಧಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ }[PS]*ದಾವೀದನ ಕೀರ್ತನೆ. [BR]ಕೀರ್ತ 39; 73 *[PE][QS]ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; [QE][QS]ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ. [QE]
2. [QS]ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; [QE][QS]ಹಸಿರು ಸಸಿಯಂತೆ ಬಾಡಿಹೋಗುವರು. [QE]
3. [QS]ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; [QE][QS]ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು. [QE]
4. [QS]ನೀನು ಯೆಹೋವನಲ್ಲಿ ಸಂತೋಷಿಸು; [QE][QS]ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು. [QE]
5. [QS]ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; [QE][QS]ಆತನೇ ಅದನ್ನು ಸಾಗಿಸುವನು. [QE]
6. [QS]ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, [QE][QS]ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು. [QE]
7. [QS]ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; [QE][QS]ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ. [QE]
8. [QS]ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. [QE][QS]ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು. [QE]
9. [QS]ಕೆಡುಕರು ತೆಗೆದುಹಾಕಲ್ಪಡುವರು; [QE][QS]ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು. [QE]
10. [QS]ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; [QE][QS]ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ. [QE]
11. [QS]ಆದರೆ ದೀನರು ದೇಶವನ್ನು ಅನುಭವಿಸುವರು; [QE][QS]ಅವರು ಮಹಾಸೌಖ್ಯದಿಂದ ಆನಂದಿಸುವರು. [QE]
12. [QS]ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; [QE][QS]ಅವನನ್ನು ನೋಡಿ ಹಲ್ಲುಕಡಿಯುತ್ತಾನೆ. [QE]
13. [QS]ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ. [QE]
14. [QS]ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; [QE][QS]ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ. [QE]
15. [QS]ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; [QE][QS]ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು; [QE]
16. [QS]ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು. [QE]
17. [QS]ದುಷ್ಟರ ತೋಳುಗಳು ಮುರಿದುಹೋಗುವವು; [QE][QS]ನೀತಿವಂತರನ್ನು ಯೆಹೋವನೇ ಉದ್ಧರಿಸುವನು. [QE]
18. [QS]ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; [QE][QS]ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು. [QE]
19. [QS]ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; [QE][QS]ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ. [QE]
20. [QS]ದುಷ್ಟರೋ ನಾಶವಾಗಿ ಹೋಗುವರು; [QE][QS]ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. [QE][QS]ಅವರು ಹಬೆಯಂತೆ ತೋರಿ ಅಡಗಿಹೋಗುವರು. [QE]
21. [QS]ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; [QE][QS]ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು. [QE]
22. [QS]ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; [QE][QS]ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು. [QE]
23. [QS]ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, [QE][QS]ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ. [QE]
24. [QS]ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; [QE][QS]ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು. [QE]
25. [QS]ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; [QE][QS]ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, [QE][QS]ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ. [QE]
26. [QS]ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; [QE][QS]ಅವನ ಸಂತತಿಯವರು ಆಶೀರ್ವಾದ ಹೊಂದುವರು. [QE]
27. [QS]ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; [QE][QS]ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ. [QE]
28. [QS]ಯೆಹೋವನು ನ್ಯಾಯವನ್ನು ಮೆಚ್ಚುವವನು; [QE][QS]ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. [QE][QS]ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು. [QE]
29. [QS]ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, [QE][QS]ಅದರಲ್ಲಿ ಶಾಶ್ವತವಾಗಿ ವಾಸಿಸುವರು. [QE]
30. [QS]ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, [QE][QS]ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ. [QE]
31. [QS]ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು; [QE][QS]ಅವನು ಜಾರುವುದೇ ಇಲ್ಲ. [QE]
32. [QS]ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ. [QE]
33. [QS]ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ; [QE][QS]ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ. [QE]
34. [QS]ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; [QE][QS]ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; [QE][QS]ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ. [QE]
35. [QS]ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ [* ಹಸಿರಾಗಿ ಬೆಳೆದ ಮರದಂತೆ ಅಂದರೆ ಲೆಬನೋನ್ ದೇಶದ ದೇವದಾರಿನಂತೆ. ] [QE][QS]ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು. [QE]
36. [QS]ತರುವಾಯ [† ಅಥವಾ ಅವನು. ]ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, [QE][QS]ಅವನು ಇಲ್ಲದೆ ಹೋಗಿದ್ದನು, [QE][QS]ಅವನನ್ನು ಹುಡುಕಿದರೂ ಸಿಕ್ಕಲಿಲ್ಲ. [QE]
37. [QS]ಒಳ್ಳೇ ನಡತೆಯುಳ್ಳವನನ್ನು ನೋಡು, [QE][QS]ಯಥಾರ್ಥನನ್ನು ಲಕ್ಷಿಸು; [QE][QS]ಶಾಂತನಿಗೆ ಸಂತಾನವೃದ್ಧಿ ಆಗುವುದು. [QE]
38. [QS]ದ್ರೋಹಿಗಳೆಲ್ಲರೂ ನಾಶವಾಗುವರು; [QE][QS]ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು. [QE]
39. [QS]ನೀತಿವಂತರ ರಕ್ಷಣೆ ಯೆಹೋವನಿಂದಲೇ; [QE][QS]ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ. [QE]
40. [QS]ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; [QE][QS]ಅವರು ಆತನ ಆಶ್ರಿತರಾದುದರಿಂದ, [QE][QS]ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 37 / 150
ಸದ್ಭಕ್ತರು ನಂಬಿಕೆಯಿಂದಲೇ ಜೀವಿಸಬೇಕೆಂದು ಬೋಧಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ 3 *ದಾವೀದನ ಕೀರ್ತನೆ.
ಕೀರ್ತ 39; 73 *
ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ. 2 ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು. 3 ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು. 4 ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು. 5 ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು. 6 ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು. 7 ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ. 8 ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು. 9 ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು. 10 ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ. 11 ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು. 12 ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ. 13 ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ. 14 ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ. 15 ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು; 16 ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು. 17 ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು. 18 ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು. 19 ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ. 20 ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು. 21 ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು. 22 ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು. 23 ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ. 24 ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು. 25 ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ. 26 ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು. 27 ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ. 28 ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು. 29 ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು. 30 ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ. 31 ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು; ಅವನು ಜಾರುವುದೇ ಇಲ್ಲ. 32 ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ. 33 ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ. 34 ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ. 35 ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ * ಹಸಿರಾಗಿ ಬೆಳೆದ ಮರದಂತೆ ಅಂದರೆ ಲೆಬನೋನ್ ದೇಶದ ದೇವದಾರಿನಂತೆ. ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು. 36 ತರುವಾಯ ಅಥವಾ ಅವನು. ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ. 37 ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು. 38 ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು. 39 ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ. 40 ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; ಅವರು ಆತನ ಆಶ್ರಿತರಾದುದರಿಂದ, ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 37 / 150
×

Alert

×

Kannada Letters Keypad References