ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; [QBR] ರೋಷದಿಂದ ನನ್ನನ್ನು ದಂಡಿಸಬೇಡ. [QBR]
2. ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; [QBR] ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ. [QBR]
3. ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; [QBR] ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ. [QBR]
4. ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; [QBR] ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ. [QBR]
5. ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು, [QBR] ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ. [QBR]
6. ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; [QBR] ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ. [QBR]
7. ನನ್ನ ಸೊಂಟಕ್ಕೆ ಉರಿಬಡಿದಂತಿದೆ; [QBR] ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ. [QBR]
8. ನನಗೆ ಜೋಮುಹಿಡಿದಂತಿದೆ; [QBR] ಬಹಳ ಮನಗುಂದಿದವನಾದೆನು. [QBR] ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ. [QBR]
9. ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; [QBR] ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ. [QBR]
10. ನನ್ನ ಹೃದಯವು ಬಡಿದುಕೊಳ್ಳುತ್ತಿದೆ; [QBR] ನನ್ನ ಚೈತನ್ಯವು ಕುಗ್ಗಿಹೋಯಿತು; [QBR] ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು. [QBR]
11. ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, [QBR] ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; [QBR] ನನ್ನ ಬಂಧುಗಳು ದೂರ ನಿಲ್ಲುತ್ತಾರೆ. [QBR]
12. ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; [QBR] ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, [QBR] ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ. [QBR]
13. ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; [QBR] ಮೂಕನಂತೆ ಬಾಯಿ ತೆರೆಯುವುದೇ ಇಲ್ಲ. [QBR]
14. ನಾನು ಕಿವಿ ಕೇಳಿಸದವನಂತೆಯೂ, [QBR] ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು. [QBR]
15. ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; [QBR] ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು. [QBR]
16. “ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; [QBR] ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು. [QBR]
17. ನನಗೆ ಆಪತ್ತೇ ಸಿದ್ಧವಾಗಿದೆ; [QBR] ಯಾವಾಗಲೂ ನನಗೆ ಸಂಕಟವಿದೆ. [QBR]
18. ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; [QBR] ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು. [QBR]
19. ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ; [QBR] ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ. [QBR]
20. ನಾನು ಒಳ್ಳೆಯದನ್ನು ಅನುಸರಿಸುವುದರಿಂದ, [QBR] ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು. [QBR]
21. ಯೆಹೋವನೇ, ಕೈ ಬಿಡಬೇಡ; [QBR] ನನ್ನ ದೇವರೇ, ದೂರವಾಗಿರಬೇಡ. [QBR]
22. ನನ್ನ ಕರ್ತನೇ, ನನ್ನ ರಕ್ಷಕನೇ, [QBR] ಬೇಗ ಬಂದು ಸಹಾಯಮಾಡು. [PE]

Notes

No Verse Added

Total 150 Chapters, Current Chapter 38 of Total Chapters 150
ಕೀರ್ತನೆಗಳು 38:15
1. ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ;
ರೋಷದಿಂದ ನನ್ನನ್ನು ದಂಡಿಸಬೇಡ.
2. ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ;
ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ.
3. ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ;
ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ.
4. ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ;
ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ.
5. ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು,
ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ.
6. ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ;
ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ.
7. ನನ್ನ ಸೊಂಟಕ್ಕೆ ಉರಿಬಡಿದಂತಿದೆ;
ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ.
8. ನನಗೆ ಜೋಮುಹಿಡಿದಂತಿದೆ;
ಬಹಳ ಮನಗುಂದಿದವನಾದೆನು.
ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.
9. ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು;
ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.
10. ನನ್ನ ಹೃದಯವು ಬಡಿದುಕೊಳ್ಳುತ್ತಿದೆ;
ನನ್ನ ಚೈತನ್ಯವು ಕುಗ್ಗಿಹೋಯಿತು;
ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು.
11. ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು,
ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ;
ನನ್ನ ಬಂಧುಗಳು ದೂರ ನಿಲ್ಲುತ್ತಾರೆ.
12. ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ;
ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು,
ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.
13. ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ;
ಮೂಕನಂತೆ ಬಾಯಿ ತೆರೆಯುವುದೇ ಇಲ್ಲ.
14. ನಾನು ಕಿವಿ ಕೇಳಿಸದವನಂತೆಯೂ,
ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು.
15. ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ;
ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು.
16. “ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು;
ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು.
17. ನನಗೆ ಆಪತ್ತೇ ಸಿದ್ಧವಾಗಿದೆ;
ಯಾವಾಗಲೂ ನನಗೆ ಸಂಕಟವಿದೆ.
18. ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ;
ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು.
19. ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ;
ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ.
20. ನಾನು ಒಳ್ಳೆಯದನ್ನು ಅನುಸರಿಸುವುದರಿಂದ,
ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು.
21. ಯೆಹೋವನೇ, ಕೈ ಬಿಡಬೇಡ;
ನನ್ನ ದೇವರೇ, ದೂರವಾಗಿರಬೇಡ.
22. ನನ್ನ ಕರ್ತನೇ, ನನ್ನ ರಕ್ಷಕನೇ,
ಬೇಗ ಬಂದು ಸಹಾಯಮಾಡು. PE
Total 150 Chapters, Current Chapter 38 of Total Chapters 150
×

Alert

×

kannada Letters Keypad References