ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ದುರವಸ್ಥೆಯಲ್ಲಿರುವ ಭಕ್ತನು ದೇವರ ಸಹಾಯವನ್ನು ಬೇಡಿಕೊಳ್ಳುವುದು }[PS]*ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು. [BR]ಕೀರ್ತ 6; ಪ್ರಲಾ 3; ಯಾಜ 2:2; 6:15; 24:7,8 *[PE][QS]ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; [QE][QS]ರೋಷದಿಂದ ನನ್ನನ್ನು ದಂಡಿಸಬೇಡ. [QE]
2. [QS]ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; [QE][QS]ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ. [QE]
3. [QS]ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; [QE][QS]ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ. [QE]
4. [QS]ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; [QE][QS]ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ. [QE]
5. [QS]ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು, [QE][QS]ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ. [QE]
6. [QS]ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; [QE][QS]ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ. [QE]
7. [QS]ನನ್ನ ಸೊಂಟಕ್ಕೆ ಉರಿಬಡಿದಂತಿದೆ; [QE][QS]ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ. [QE]
8. [QS]ನನಗೆ ಜೋಮುಹಿಡಿದಂತಿದೆ; [QE][QS]ಬಹಳ ಮನಗುಂದಿದವನಾದೆನು. [QE][QS]ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ. [QE]
9. [QS]ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; [QE][QS]ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ. [QE]
10. [QS]ನನ್ನ ಹೃದಯವು ಬಡಿದುಕೊಳ್ಳುತ್ತಿದೆ; [QE][QS]ನನ್ನ ಚೈತನ್ಯವು ಕುಗ್ಗಿಹೋಯಿತು; [QE][QS]ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು. [QE]
11. [QS]ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, [QE][QS]ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; [QE][QS]ನನ್ನ ಬಂಧುಗಳು ದೂರ ನಿಲ್ಲುತ್ತಾರೆ. [QE]
12. [QS]ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; [QE][QS]ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, [QE][QS]ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ. [QE]
13. [QS]ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; [QE][QS]ಮೂಕನಂತೆ ಬಾಯಿ ತೆರೆಯುವುದೇ ಇಲ್ಲ. [QE]
14. [QS]ನಾನು ಕಿವಿ ಕೇಳಿಸದವನಂತೆಯೂ, [QE][QS]ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು. [QE]
15. [QS]ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; [QE][QS]ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು. [QE]
16. [QS]“ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; [QE][QS]ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು. [QE]
17. [QS]ನನಗೆ ಆಪತ್ತೇ ಸಿದ್ಧವಾಗಿದೆ; [QE][QS]ಯಾವಾಗಲೂ ನನಗೆ ಸಂಕಟವಿದೆ. [QE]
18. [QS]ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; [QE][QS]ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು. [QE]
19. [QS]ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ; [QE][QS]ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ. [QE]
20. [QS]ನಾನು ಒಳ್ಳೆಯದನ್ನು ಅನುಸರಿಸುವುದರಿಂದ, [QE][QS]ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು. [QE]
21. [QS]ಯೆಹೋವನೇ, ಕೈ ಬಿಡಬೇಡ; [QE][QS]ನನ್ನ ದೇವರೇ, ದೂರವಾಗಿರಬೇಡ. [QE]
22. [QS]ನನ್ನ ಕರ್ತನೇ, ನನ್ನ ರಕ್ಷಕನೇ, [QE][QS]ಬೇಗ ಬಂದು ಸಹಾಯಮಾಡು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 38 / 150
ದುರವಸ್ಥೆಯಲ್ಲಿರುವ ಭಕ್ತನು ದೇವರ ಸಹಾಯವನ್ನು ಬೇಡಿಕೊಳ್ಳುವುದು 3 *ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು.
ಕೀರ್ತ 6; ಪ್ರಲಾ 3; ಯಾಜ 2:2; 6:15; 24:7,8 *
ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ. 2 ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ. 3 ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ. 4 ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ. 5 ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು, ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ. 6 ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ. 7 ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ. 8 ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ. 9 ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ. 10 ನನ್ನ ಹೃದಯವು ಬಡಿದುಕೊಳ್ಳುತ್ತಿದೆ; ನನ್ನ ಚೈತನ್ಯವು ಕುಗ್ಗಿಹೋಯಿತು; ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು. 11 ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ. 12 ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ. 13 ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; ಮೂಕನಂತೆ ಬಾಯಿ ತೆರೆಯುವುದೇ ಇಲ್ಲ. 14 ನಾನು ಕಿವಿ ಕೇಳಿಸದವನಂತೆಯೂ, ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು. 15 ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು. 16 “ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು. 17 ನನಗೆ ಆಪತ್ತೇ ಸಿದ್ಧವಾಗಿದೆ; ಯಾವಾಗಲೂ ನನಗೆ ಸಂಕಟವಿದೆ. 18 ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು. 19 ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ; ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ. 20 ನಾನು ಒಳ್ಳೆಯದನ್ನು ಅನುಸರಿಸುವುದರಿಂದ, ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು. 21 ಯೆಹೋವನೇ, ಕೈ ಬಿಡಬೇಡ; ನನ್ನ ದೇವರೇ, ದೂರವಾಗಿರಬೇಡ. 22 ನನ್ನ ಕರ್ತನೇ, ನನ್ನ ರಕ್ಷಕನೇ, ಬೇಗ ಬಂದು ಸಹಾಯಮಾಡು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 38 / 150
×

Alert

×

Kannada Letters Keypad References