ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; [QBR] ರೋಷದಿಂದ ನನ್ನನ್ನು ದಂಡಿಸಬೇಡ. [QBR]
2. ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; [QBR] ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ. [QBR]
3. ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; [QBR] ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ. [QBR]
4. ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; [QBR] ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ. [QBR]
5. ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು, [QBR] ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ. [QBR]
6. ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; [QBR] ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ. [QBR]
7. ನನ್ನ ಸೊಂಟಕ್ಕೆ ಉರಿಬಡಿದಂತಿದೆ; [QBR] ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ. [QBR]
8. ನನಗೆ ಜೋಮುಹಿಡಿದಂತಿದೆ; [QBR] ಬಹಳ ಮನಗುಂದಿದವನಾದೆನು. [QBR] ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ. [QBR]
9. ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; [QBR] ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ. [QBR]
10. ನನ್ನ ಹೃದಯವು ಬಡಿದುಕೊಳ್ಳುತ್ತಿದೆ; [QBR] ನನ್ನ ಚೈತನ್ಯವು ಕುಗ್ಗಿಹೋಯಿತು; [QBR] ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು. [QBR]
11. ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, [QBR] ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; [QBR] ನನ್ನ ಬಂಧುಗಳು ದೂರ ನಿಲ್ಲುತ್ತಾರೆ. [QBR]
12. ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; [QBR] ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, [QBR] ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ. [QBR]
13. ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; [QBR] ಮೂಕನಂತೆ ಬಾಯಿ ತೆರೆಯುವುದೇ ಇಲ್ಲ. [QBR]
14. ನಾನು ಕಿವಿ ಕೇಳಿಸದವನಂತೆಯೂ, [QBR] ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು. [QBR]
15. ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; [QBR] ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು. [QBR]
16. “ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; [QBR] ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು. [QBR]
17. ನನಗೆ ಆಪತ್ತೇ ಸಿದ್ಧವಾಗಿದೆ; [QBR] ಯಾವಾಗಲೂ ನನಗೆ ಸಂಕಟವಿದೆ. [QBR]
18. ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; [QBR] ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು. [QBR]
19. ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ; [QBR] ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ. [QBR]
20. ನಾನು ಒಳ್ಳೆಯದನ್ನು ಅನುಸರಿಸುವುದರಿಂದ, [QBR] ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು. [QBR]
21. ಯೆಹೋವನೇ, ಕೈ ಬಿಡಬೇಡ; [QBR] ನನ್ನ ದೇವರೇ, ದೂರವಾಗಿರಬೇಡ. [QBR]
22. ನನ್ನ ಕರ್ತನೇ, ನನ್ನ ರಕ್ಷಕನೇ, [QBR] ಬೇಗ ಬಂದು ಸಹಾಯಮಾಡು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 38 / 150
ಕೀರ್ತನೆಗಳು 38:72
1 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ. 2 ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ. 3 ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ. 4 ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ. 5 ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು, ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ. 6 ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ. 7 ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ. 8 ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ. 9 ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ. 10 ನನ್ನ ಹೃದಯವು ಬಡಿದುಕೊಳ್ಳುತ್ತಿದೆ; ನನ್ನ ಚೈತನ್ಯವು ಕುಗ್ಗಿಹೋಯಿತು; ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು. 11 ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ. 12 ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ. 13 ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; ಮೂಕನಂತೆ ಬಾಯಿ ತೆರೆಯುವುದೇ ಇಲ್ಲ. 14 ನಾನು ಕಿವಿ ಕೇಳಿಸದವನಂತೆಯೂ, ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು. 15 ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು. 16 “ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು. 17 ನನಗೆ ಆಪತ್ತೇ ಸಿದ್ಧವಾಗಿದೆ; ಯಾವಾಗಲೂ ನನಗೆ ಸಂಕಟವಿದೆ. 18 ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು. 19 ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ; ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ. 20 ನಾನು ಒಳ್ಳೆಯದನ್ನು ಅನುಸರಿಸುವುದರಿಂದ, ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು. 21 ಯೆಹೋವನೇ, ಕೈ ಬಿಡಬೇಡ; ನನ್ನ ದೇವರೇ, ದೂರವಾಗಿರಬೇಡ. 22 ನನ್ನ ಕರ್ತನೇ, ನನ್ನ ರಕ್ಷಕನೇ, ಬೇಗ ಬಂದು ಸಹಾಯಮಾಡು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 38 / 150
Common Bible Languages
West Indian Languages
×

Alert

×

kannada Letters Keypad References