ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. “ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, [QBR] ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು. [QBR]
2. ನಾನು ಮೌನವಾಗಿದ್ದೆನು; [QBR] ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; [QBR] ಆದರೆ ನನ್ನ ಸಂಕಟವು ಹೆಚ್ಚಿತು. [QBR]
3. ನನ್ನ ಹೃದಯವು ಆತಂಕದಿಂದ ಕೂಡಿತ್ತು; [QBR] ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು. [QBR] ಆಗ ನಾನು ಬಾಯಿ ಬಿಟ್ಟು, [QBR]
4. “ಯೆಹೋವನೇ, ನನಗೆ ಅವಸಾನವುಂಟೆಂದೂ, [QBR] ನನ್ನ ಜೀವಮಾನವು ಅತ್ಯಲ್ಪವೆಂದೂ, [QBR] ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು. [QBR]
5. ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; [QBR] ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. [QBR] ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. ಸೆಲಾ
6. ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; [QBR] ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; [QBR] ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, [QBR] ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು. [QBR]
7. “ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವುದಕ್ಕೆ ಕಾದುಕೊಳ್ಳಲಿ? [QBR] ನೀನೇ ನನ್ನ ನಿರೀಕ್ಷೆ. [QBR]
8. ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡುಗಡೆಮಾಡು; [QBR] ಮೂರ್ಖರ ನಿಂದೆಗೆ ಗುರಿಮಾಡಬೇಡ. [QBR]
9. ನೀನೇ ಇದನ್ನು ಬರಮಾಡಿದ್ದರಿಂದ [QBR] ನಾನು ಏನೂ ಹೇಳದೆ ಮೌನವಾಗಿರುವೆನು. [QBR]
10. ನಿನ್ನ ದಂಡನೆಯನ್ನು ತೊಲಗಿಸು; [QBR] ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ. [QBR]
11. ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ, [QBR] ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. [QBR] ಮನುಷ್ಯನೆಂಬವನು ಬರಿ ಉಸಿರೇ. ಸೆಲಾ
12. ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; [QBR] ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. [QBR] ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, [QBR] ಪರದೇಶದವನೂ ಆಗಿದ್ದೇನಲ್ಲಾ. [QBR]
13. ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, [QBR] ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು [QBR] ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.” [PE]

Notes

No Verse Added

Total 150 Chapters, Current Chapter 39 of Total Chapters 150
ಕೀರ್ತನೆಗಳು 39:12
1. “ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು,
ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು.
2. ನಾನು ಮೌನವಾಗಿದ್ದೆನು;
ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು;
ಆದರೆ ನನ್ನ ಸಂಕಟವು ಹೆಚ್ಚಿತು.
3. ನನ್ನ ಹೃದಯವು ಆತಂಕದಿಂದ ಕೂಡಿತ್ತು;
ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು.
ಆಗ ನಾನು ಬಾಯಿ ಬಿಟ್ಟು,
4. “ಯೆಹೋವನೇ, ನನಗೆ ಅವಸಾನವುಂಟೆಂದೂ,
ನನ್ನ ಜೀವಮಾನವು ಅತ್ಯಲ್ಪವೆಂದೂ,
ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು.
5. ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ;
ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು.
ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. ಸೆಲಾ
6. ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು;
ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು;
ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ,
ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.
7. “ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವುದಕ್ಕೆ ಕಾದುಕೊಳ್ಳಲಿ?
ನೀನೇ ನನ್ನ ನಿರೀಕ್ಷೆ.
8. ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡುಗಡೆಮಾಡು;
ಮೂರ್ಖರ ನಿಂದೆಗೆ ಗುರಿಮಾಡಬೇಡ.
9. ನೀನೇ ಇದನ್ನು ಬರಮಾಡಿದ್ದರಿಂದ
ನಾನು ಏನೂ ಹೇಳದೆ ಮೌನವಾಗಿರುವೆನು.
10. ನಿನ್ನ ದಂಡನೆಯನ್ನು ತೊಲಗಿಸು;
ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.
11. ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ,
ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ.
ಮನುಷ್ಯನೆಂಬವನು ಬರಿ ಉಸಿರೇ. ಸೆಲಾ
12. ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು;
ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ.
ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ,
ಪರದೇಶದವನೂ ಆಗಿದ್ದೇನಲ್ಲಾ.
13. ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು,
ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು
ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.” PE
Total 150 Chapters, Current Chapter 39 of Total Chapters 150
×

Alert

×

kannada Letters Keypad References