1. “ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು,
ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು. |
3. ನನ್ನ ಹೃದಯವು ಆತಂಕದಿಂದ ಕೂಡಿತ್ತು;
ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು. ಆಗ ನಾನು ಬಾಯಿ ಬಿಟ್ಟು, |
4. “ಯೆಹೋವನೇ, ನನಗೆ ಅವಸಾನವುಂಟೆಂದೂ,
ನನ್ನ ಜೀವಮಾನವು ಅತ್ಯಲ್ಪವೆಂದೂ, ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು. |
5. ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ;
ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. ಸೆಲಾ |
6. ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು;
ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು. |
11. ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ,
ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರಿ ಉಸಿರೇ. ಸೆಲಾ |
12. ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು;
ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ. |
13. ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು,
ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.” PE |