3. {#3ಮನುಷ್ಯನ ಅಸ್ಥಿರತೆಯನ್ನು ದೇವರ ಮುಂದೆ ಅರಿಕೆಮಾಡುವುದು }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದೂತೂನನ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಕೀರ್ತನೆ. *[PE][QS]“ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, [QE][QS]ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು. [QE]
2. [QS]ನಾನು ಮೌನವಾಗಿದ್ದೆನು; [QE][QS]ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; [QE][QS]ಆದರೆ ನನ್ನ ಸಂಕಟವು ಹೆಚ್ಚಿತು. [QE]
3. [QS]ನನ್ನ ಹೃದಯವು ಆತಂಕದಿಂದ ಕೂಡಿತ್ತು; [QE][QS]ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು. [QE][QS]ಆಗ ನಾನು ಬಾಯಿ ಬಿಟ್ಟು, [QE]
4. [QS]“ಯೆಹೋವನೇ, ನನಗೆ ಅವಸಾನವುಂಟೆಂದೂ, [QE][QS]ನನ್ನ ಜೀವಮಾನವು ಅತ್ಯಲ್ಪವೆಂದೂ, [QE][QS]ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು. [QE]
5. [QS]ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; [QE][QS]ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. [QE][QS]ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. [QE][QSS]ಸೆಲಾ [QSE]
6. [QS]ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; [QE][QS]ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; [QE][QS]ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, [QE][QS]ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು. [QE]
7. [QS]“ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವುದಕ್ಕೆ ಕಾದುಕೊಳ್ಳಲಿ? [QE][QS]ನೀನೇ ನನ್ನ ನಿರೀಕ್ಷೆ. [QE]
8. [QS]ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡುಗಡೆಮಾಡು; [QE][QS]ಮೂರ್ಖರ ನಿಂದೆಗೆ ಗುರಿಮಾಡಬೇಡ. [QE]
9. [QS]ನೀನೇ ಇದನ್ನು ಬರಮಾಡಿದ್ದರಿಂದ [QE][QS]ನಾನು ಏನೂ ಹೇಳದೆ ಮೌನವಾಗಿರುವೆನು. [QE]
10. [QS]ನಿನ್ನ ದಂಡನೆಯನ್ನು ತೊಲಗಿಸು; [QE][QS]ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ. [QE]
11. [QS]ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ, [QE][QS]ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. [QE][QS]ಮನುಷ್ಯನೆಂಬವನು ಬರಿ ಉಸಿರೇ. [QE][QSS]ಸೆಲಾ [QSE]
12. [QS]ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; [QE][QS]ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. [QE][QS]ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, [QE][QS]ಪರದೇಶದವನೂ ಆಗಿದ್ದೇನಲ್ಲಾ. [QE]
13. [QS]ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, [QE][QS]ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು [QE][QS]ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.” [QE]