ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ವಿಶ್ವಾಸಯುಕ್ತ ಸಂಧ್ಯಾಕಾಲದ ಗೀತೆ }[PS]*ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. *[PE][QS]ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; [QE][QS]ಸದುತ್ತರವನ್ನು ದಯಪಾಲಿಸು. [QE][QS]ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, [QE][QS]ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು. [QE]
2. [QS]ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ, [QE][QS]ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ? [QE][QS]ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? [QE][QSS]ಸೆಲಾ [QSE]
3. [QS]ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ. [QE][QS]ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ. [QE]
4. [QS]ಭಯಪಡಿರಿ, ಪಾಪಮಾಡಬೇಡಿರಿ; [QE][QS]ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. [QE][QSS]ಸೆಲಾ [QSE]
5. [QS]ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; [QE][QS]ಯೆಹೋವನಲ್ಲಿಯೇ ಭರವಸವಿಡಿರಿ. [QE]
6. [QS]“ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. [QE][QS]ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು. [QE]
7. [QS]ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ [QE][QS]ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ. [QE]
8. [QS]ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. [QE][QS]ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 150
ವಿಶ್ವಾಸಯುಕ್ತ ಸಂಧ್ಯಾಕಾಲದ ಗೀತೆ 3 *ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. *ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು. 2 ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ, ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ? ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? QSS ಸೆಲಾ SE 3 ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ. 4 ಭಯಪಡಿರಿ, ಪಾಪಮಾಡಬೇಡಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. QSS ಸೆಲಾ SE 5 ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; ಯೆಹೋವನಲ್ಲಿಯೇ ಭರವಸವಿಡಿರಿ. 6 “ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು. 7 ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ. 8 ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 150
×

Alert

×

Kannada Letters Keypad References