ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; [QBR] ಸದುತ್ತರವನ್ನು ದಯಪಾಲಿಸು. [QBR] ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, [QBR] ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು. [QBR]
2. ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ, [QBR] ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ? [QBR] ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ
3. ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ. [QBR] ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ. [QBR]
4. ಭಯಪಡಿರಿ, ಪಾಪಮಾಡಬೇಡಿರಿ; [QBR] ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. ಸೆಲಾ
5. ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; [QBR] ಯೆಹೋವನಲ್ಲಿಯೇ ಭರವಸವಿಡಿರಿ. [QBR]
6. “ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. [QBR] ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು. [QBR]
7. ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ [QBR] ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ. [QBR]
8. ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. [QBR] ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 150
ಕೀರ್ತನೆಗಳು 4:35
1 ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು. 2 ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ, ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ? ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ 3 ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ. 4 ಭಯಪಡಿರಿ, ಪಾಪಮಾಡಬೇಡಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. ಸೆಲಾ 5 ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; ಯೆಹೋವನಲ್ಲಿಯೇ ಭರವಸವಿಡಿರಿ. 6 “ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು. 7 ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ. 8 ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 150
Common Bible Languages
West Indian Languages
×

Alert

×

kannada Letters Keypad References