ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; [QBR] ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು. [QBR]
2. ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; [QBR] ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, [QBR] ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು. [QBR]
3. ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; [QBR] ಅದು ನಮ್ಮ ದೇವರ ಸ್ತೋತ್ರವೇ. [QBR] ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು [QBR] ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು. [QBR]
4. ಯಾರು [* ಅಥವಾ ವಿಗ್ರಹಗಳ.] ಅಹಂಕಾರಿಗಳ ಜೊತೆಯಲ್ಲಿಯೂ, [QBR] ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ, [QBR] ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು. [QBR]
5. ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? [QBR] ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, [QBR] ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; [QBR] ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; [QBR] ಅವು ಅಸಂಖ್ಯಾತವಾಗಿವೆ. [QBR]
6. ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; [QBR] ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. [QBR] ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ. [QBR]
7. ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ. [QBR]
8. ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; [QBR] ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು. [QBR]
9. ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, [QBR] ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; [QBR] ಯೆಹೋವನೇ, ನೀನೇ ಬಲ್ಲೆ. [QBR]
10. ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; [QBR] ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; [QBR] ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ. [QBR]
11. ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; [QBR] ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ. [QBR]
12. ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; [QBR] ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, [QBR] ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, [QBR] ನಾನು ಎದೆಗುಂದಿ ಹೋದೆನು. [QBR]
13. ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು; [QBR] ಯೆಹೋವನೇ, ಬೇಗನೆ ಬಂದು ಸಹಾಯಮಾಡು. [QBR]
14. ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, [QBR] ಆಶಾಭಂಗಪಟ್ಟು ಅವಮಾನಹೊಂದಲಿ; [QBR] ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ. [QBR]
15. ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯಮಾಡುವವರು, [QBR] ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ. [QBR]
16. ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; [QBR] ನಿನ್ನ ಜಯದಲ್ಲಿ ಆನಂದಿಸುವವರು, “ಯೆಹೋವನು ಮಹೋನ್ನತನು” ಎಂದು ಯಾವಾಗಲೂ ಹೇಳುವವರಾಗಲಿ. [QBR]
17. ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; [QBR] ಕರ್ತನೇ ನನ್ನ ಹಿತಚಿಂತಕನು. [QBR] ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; [QBR] ತಡಮಾಡಬೇಡ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 40 / 150
ಕೀರ್ತನೆಗಳು 40:125
1 ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು. 2 ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು. 3 ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು. 4 ಯಾರು * ಅಥವಾ ವಿಗ್ರಹಗಳ. ಅಹಂಕಾರಿಗಳ ಜೊತೆಯಲ್ಲಿಯೂ, ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ, ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು. 5 ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ. 6 ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ. 7 ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ. 8 ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು. 9 ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ. 10 ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ. 11 ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ. 12 ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು. 13 ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು; ಯೆಹೋವನೇ, ಬೇಗನೆ ಬಂದು ಸಹಾಯಮಾಡು. 14 ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ. 15 ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯಮಾಡುವವರು, ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ. 16 ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ಯೆಹೋವನು ಮಹೋನ್ನತನು” ಎಂದು ಯಾವಾಗಲೂ ಹೇಳುವವರಾಗಲಿ. 17 ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 40 / 150
Common Bible Languages
West Indian Languages
×

Alert

×

kannada Letters Keypad References