3. {#3ರಕ್ಷಣೆಗಾಗಿ ಪ್ರಾರ್ಥಿಸುವುದು }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. *[PE][QS]ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; [QE][QS]ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು. [QE]
2. [QS]ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; [QE][QS]ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, [QE][QS]ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು. [QE]
3. [QS]ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; [QE][QS]ಅದು ನಮ್ಮ ದೇವರ ಸ್ತೋತ್ರವೇ. [QE][QS]ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು [QE][QS]ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು. [QE]
4. [QS]ಯಾರು [* ಅಥವಾ ವಿಗ್ರಹಗಳ. ]ಅಹಂಕಾರಿಗಳ ಜೊತೆಯಲ್ಲಿಯೂ, [QE][QS]ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ, [QE][QS]ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು. [QE]
5. [QS]ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? [QE][QS]ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, [QE][QS]ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; [QE][QS]ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; [QE][QS]ಅವು ಅಸಂಖ್ಯಾತವಾಗಿವೆ. [QE]
6. [QS]ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; [QE][QS]ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. [QE][QS]ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ. [QE]
7. [QS]ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ. [QE]
8. [QS]ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; [QE][QS]ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು. [QE]
9. [QS]ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, [QE][QS]ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; [QE][QS]ಯೆಹೋವನೇ, ನೀನೇ ಬಲ್ಲೆ. [QE]
10. [QS]ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; [QE][QS]ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; [QE][QS]ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ. [QE]
11. [QS]ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; [QE][QS]ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ. [QE]
12. [QS]ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; [QE][QS]ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, [QE][QS]ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, [QE][QS]ನಾನು ಎದೆಗುಂದಿ ಹೋದೆನು. [QE]
13. [QS]ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು; [QE][QS]ಯೆಹೋವನೇ, ಬೇಗನೆ ಬಂದು ಸಹಾಯಮಾಡು. [QE]
14. [QS]ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, [QE][QS]ಆಶಾಭಂಗಪಟ್ಟು ಅವಮಾನಹೊಂದಲಿ; [QE][QS]ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ. [QE]
15. [QS]ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯಮಾಡುವವರು, [QE][QS]ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ. [QE]
16. [QS]ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; [QE][QS]ನಿನ್ನ ಜಯದಲ್ಲಿ ಆನಂದಿಸುವವರು, “ಯೆಹೋವನು ಮಹೋನ್ನತನು” ಎಂದು ಯಾವಾಗಲೂ ಹೇಳುವವರಾಗಲಿ. [QE]
17. [QS]ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; [QE][QS]ಕರ್ತನೇ ನನ್ನ ಹಿತಚಿಂತಕನು. [QE][QS]ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; [QE][QS]ತಡಮಾಡಬೇಡ. [QE]