2. ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು;
ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು. |
3. ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ;
ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು. |
4. ಯಾರು * ಅಥವಾ ವಿಗ್ರಹಗಳ. ಅಹಂಕಾರಿಗಳ ಜೊತೆಯಲ್ಲಿಯೂ,
ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ, ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು. |
5. ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು?
ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ. |
6. ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ;
ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ. |
8. ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು;
ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು. |
10. ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ;
ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ. |
11. ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ;
ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ. |
12. ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ;
ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು. |
14. ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು,
ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ. |
16. ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ;
ನಿನ್ನ ಜಯದಲ್ಲಿ ಆನಂದಿಸುವವರು, “ಯೆಹೋವನು ಮಹೋನ್ನತನು” ಎಂದು ಯಾವಾಗಲೂ ಹೇಳುವವರಾಗಲಿ. |
17. ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ;
ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ. PE |