ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; [QBR] ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು. [QBR]
2. ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; [QBR] ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; [QBR] ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ! [QBR]
3. ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, [QBR] ಯೆಹೋವನು ಅವನನ್ನು ಉದ್ಧರಿಸುವನು; [QBR] ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ. [QBR]
4. ನಾನಂತೂ, “ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; [QBR] ನನ್ನನ್ನು ಕರುಣಿಸಿ ಸ್ವಸ್ಥಮಾಡು” ಅಂದೆನು. [QBR]
5. ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು? [QBR] ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ. [QBR]
6. ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; [QBR] ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ. [QBR]
7. ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ; [QBR] [* ಅಥವಾ ನನಗೆ ಕೇಡನ್ನು ಕಲ್ಪಿಸುತ್ತಾರೆ. ] ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ. [QBR]
8. “ಅವನನ್ನು ಅಸಾಧ್ಯರೋಗ ಹಿಡಿದಿದೆ; [QBR] ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. [QBR]
9. ನಾನು ಯಾರನ್ನು ನಂಬಿದ್ದೆನೋ, [QBR] ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, [QBR] ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ. [QBR]
10. ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು; [QBR] ಆಗ ನಾನು ಅವರಿಗೆ ಮುಯ್ಯಿತೀರಿಸುವೆನು. [QBR]
11. ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ [QBR] ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು. [QBR]
12. ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, [QBR] ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ. [QBR]
13. ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 41 / 150
ಕೀರ್ತನೆಗಳು 41:49
1 ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು. 2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ! 3 ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ. 4 ನಾನಂತೂ, “ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು” ಅಂದೆನು. 5 ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ. 6 ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ. 7 ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ; * ಅಥವಾ ನನಗೆ ಕೇಡನ್ನು ಕಲ್ಪಿಸುತ್ತಾರೆ. ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ. 8 “ಅವನನ್ನು ಅಸಾಧ್ಯರೋಗ ಹಿಡಿದಿದೆ; ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. 9 ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ. 10 ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು. 11 ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು. 12 ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ. 13 ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 41 / 150
Common Bible Languages
West Indian Languages
×

Alert

×

kannada Letters Keypad References