3. {#3ದ್ವಿತೀಯ ಭಾಗವು 42 - 72 }[PS]*ದೇಶಾಂತರದಲ್ಲಿರುವ ಭಕ್ತನು ದೇವದರ್ಶನಕ್ಕಾಗಿ ಹಂಬಲಿಸುವುದು. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. *[PE][QS]ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, [QE][QS]ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ. [QE]
2. [QS]ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; [QE][QS]ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ? [QE]
3. [QS]“ನಿನ್ನ ದೇವರು ಎಲ್ಲಿ?” ಎಂದು ಜನರು [QE][QS]ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ, [QE][QS]ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು. [QE]
4. [QS]ನಾನು ಭಜನೋತ್ಸವದಲ್ಲಿ ಸೇರಿ, [QE][QS]ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, [QE][QS]ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, [QE][QS]ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು. [QE]
5. [QS]ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? [QE][QS]ಹೀಗೆ ವ್ಯಥೆಪಡುವುದೇಕೆ? [QE][QS]ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. [QE][QS]ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು. [QE]
6. [QS]ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; [QE][QS]ಆದುದರಿಂದ ಯೊರ್ದನ್ ಹೊಳೆಯ ದೇಶ, [QE][QS]ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ. [QE]
7. [QS]ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು [QE][QS]ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು. [QE][QS]ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು [QE][QS]ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ. [QE]
8. [QS]ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; [QE][QS]ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು. [QE][QS]ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು. [QE]
9. [QS]ನಾನು ನನ್ನ ಶರಣನಿಗೆ, “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ? [QE][QS]ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?” ಎಂದು ಮೊರೆಯಿಡುವೆನು. [QE]
10. [QS]ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ [QE][QS]ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ. [QE]
11. [QS]ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? [QE][QS]ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; [QE][QS]ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; [QE][QS]ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು. [QE]