ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. [QS]ದೇವರೇ, ನ್ಯಾಯವನ್ನು ತೀರಿಸು; [QE][QS]ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, [QE][QS]ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು. [QE]
2. [QS]ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; [QE][QS]ಏಕೆ ನನ್ನನ್ನು ತಳ್ಳಿಬಿಟ್ಟೆ? [QE][QS]ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು? [QE]
3. [QS]ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; [QE][QS]ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ. [QE]
4. [QS]ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, [QE][QS]ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, [QE][QS]ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. [QE]
5. [QS]ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? [QE][QS]ದೇವರನ್ನು ನಿರೀಕ್ಷಿಸು; [QE][QS]ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; [QE][QS]ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 43 / 150
1 ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು. 2 ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; ಏಕೆ ನನ್ನನ್ನು ತಳ್ಳಿಬಿಟ್ಟೆ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು? 3 ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ. 4 ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. 5 ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 43 / 150
×

Alert

×

Kannada Letters Keypad References