1. ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, [QBR] ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; [QBR] ಅವರೇ ನಮಗೆ ತಿಳಿಸಿದರು. [QBR]
2. ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, [QBR] ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; [QBR] ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ. [QBR]
3. ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; [QBR] ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; [QBR] ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ. [QBR]
4. [* ಅಥವಾ ನೀನೇ ನನ್ನ ಅರಸನು, ಓ ದೇವರೇ, ಯಾಕೋಬನಿಗೆ ಜಯವನ್ನು ಆಜ್ಞಾಪಿಸು.] ದೇವರೇ, ನೀನೇ ನನ್ನ ಅರಸನು; [QBR] ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು. [QBR]
5. ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು; [QBR] ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು. [QBR]
6. ನಾನು ನನ್ನ ಬಿಲ್ಲಿನಲ್ಲಿ ಭರವಸವಿಡುವುದಿಲ್ಲ; [QBR] ಇಲ್ಲವೇ ನನ್ನ ಕತ್ತಿಯು ನನ್ನನ್ನು ರಕ್ಷಿಸಲಾರದು. [QBR]
7. ಹಿಂಸಕರಿಂದ ಬಿಡಿಸಿದವನು ನೀನೇ; [QBR] ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ. [QBR]
8. ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; [QBR] ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು. [QBR]
9. ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ; [QBR] ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ. [QBR]
10. ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದಿ; [QBR] ನಮ್ಮ ವೈರಿಗಳು ತಮಗೋಸ್ಕರ ಬೇಕಾದ ಹಾಗೆ ಕೊಳ್ಳೆಹೊಡೆಯುತ್ತಾರೆ. [QBR]
11. ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ; [QBR] ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ. [QBR]
12. ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ, [QBR] ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ. [QBR]
13. ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದಿ; [QBR] ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ, ಕುಚೋದ್ಯಕ್ಕೂ ಒಳಪಡಿಸಿದಿ. [QBR]
14. ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ; [QBR] ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ. [QBR]
15. ದೂಷಕರ ನಿಂದಾವಚನಗಳಿಂದಲೂ, [QBR] ಮುಯ್ಯಿತೀರಿಸುವ ವೈರಿಗಳ ದೃಷ್ಟಿಯಿಂದಲೂ, [QBR]
16. ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; [QBR] ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ. [QBR]
17. ನಾವು ನಿನ್ನನ್ನು ಮರೆಯದೆಯೂ, [QBR] ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ; [QBR] ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ! [QBR]
18. ನಮ್ಮ ಹೃದಯವು ಹಿಂದಿರುಗಲಿಲ್ಲ; [QBR] ನಮ್ಮ ಹೆಜ್ಜೆಗಳು ನಿನ್ನ ದಾರಿಯಿಂದ ತೊಲಗಲಿಲ್ಲ. [QBR]
19. ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? [QBR] ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ? [QBR]
20. ನಾವು ನಮ್ಮ ದೇವರ ಹೆಸರನ್ನು ಮರೆತು, [QBR] ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ, [QBR]
21. ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, [QBR] ವಿಚಾರಿಸುತ್ತಿರಲಿಲ್ಲವೋ? [QBR]
22. ದೇವರೇ, ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; [QBR] ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ. [QBR]
23. ಕರ್ತನೇ, ಏಕೆ ನಿದ್ರಿಸುತ್ತೀ? ಎಚ್ಚರವಾಗು; [QBR] ಏಳು, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡ. [QBR]
24. ಏಕೆ ವಿಮುಖನಾಗಿದ್ದಿ? [QBR] ನಮಗಿರುವ ಬಾಧೆಗಳನ್ನೂ, ಹಿಂಸೆಗಳನ್ನೂ ಏಕೆ ಲಕ್ಷಿಸುವುದಿಲ್ಲ? [QBR]
25. ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ; [QBR] ನಮ್ಮ ಶರೀರವು ನೆಲಕ್ಕೆ ಅಂಟಿಕೊಂಡಿದೆ. [QBR]
26. ಎದ್ದು ಬಂದು ಸಹಾಯಮಾಡು; [QBR] ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಗಾಗಿ ನಮ್ಮನ್ನು ವಿಮೋಚಿಸು. [PE]