3. {#3ರಾಜನ ವಿವಾಹದ ವರ್ಣನೆ }[PS]*1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋಶನ್ನೀಮ್ ಎಂಬ ರಾಗದ ಮೇಲೆ ಹಾಡತಕ್ಕದ್ದು; ಕೋರಹೀಯರ ಪದ್ಯ; ಪ್ರೇಮಗೀತೆ. [BR]ಯೆಶಾ 61:10-62:5 *[PE][QS]ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; [QE][QS]ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. [QE][QS]ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ. [QE]
2. [QS]ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; [QE][QS]ನಿನ್ನ ಮಾತುಗಳು ಬಹು ಮಧುರ; [QE][QS]ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ. [QE]
3. [QS]ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, [QE][QS]ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ. [QE]
4. [QS]ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ [QE][QS]ಸಕಲ ವೈಭವದೊಡನೆ ವಾಹನರೂಢನಾಗಿ, [QE][QS]ವಿಜಯೋತ್ಸವದೊಡನೆ ಹೊರಡು. [QE][QS]ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ. [QE]
5. [QS]ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; [QE][QS]ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; [QE][QS]ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು. [QE]
6. [QS] [* ಅಥವಾ ದೇವರೇ, ನಿನ್ನ ಸಿಂಹಾಸನವು. ]ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; [QE][QS]ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ. [QE]
7. [QS]ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; [QE][QS]ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, [QE][QS]ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ. [QE]
8. [QS]ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ [QE][QS]ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; [QE][QS]ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ. [QE]
9. [QS]ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; [QE][QS]ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ, [QE][QS]ನಿನ್ನ ಬಲಭಾಗದಲ್ಲಿ ನಿಂತಿರುವಳು. [QE]
10. [QS]ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; [QE][QS]ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು. [QE]
11. [QS]ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. [QE][QS]ಆತನೇ ನಿನಗೆ ಒಡೆಯನು; [QE][QS]ಆತನನ್ನು ಗೌರವಿಸು. [QE]
12. [QS]ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; [QE][QS]ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು. [QE]
13. [QS]ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; [QE][QS]ಆಕೆಯು ಜರತಾರಿಯ[† ಜರತಾರಿಯ ಚಿನ್ನದಿಂದ ನೇಯ್ದ ] ವಸ್ತ್ರವನ್ನು ಧರಿಸಿಕೊಂಡಿದ್ದಾಳೆ. [QE]
14. [QS]ಆಕೆಯು ಬೂಟೇದಾರಿ [‡ ಬೂಟೇದಾರಿ ಕಸೂತಿ ಕೆಲಸದ ]ವಸ್ತ್ರಗಳನ್ನು ಧರಿಸಿಕೊಂಡು, [QE][QS]ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ, [QE][QS]ಅರಸನ ಬಳಿಗೆ ಬರುವರು. [QE]
15. [QS]ಅವರು ಉಲ್ಲಾಸದಿಂದಲೂ, ಸಂತೋಷದಿಂದಲೂ ಬಂದು, [QE][QS]ಅರಮನೆಯೊಳಗೆ ಪ್ರವೇಶಿಸುವರು. [QE]
16. [QS]ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು; [QE][QS]ನೀನು ಅವರನ್ನು ಭೂಮಿಯ ಮೇಲೆಲ್ಲಾ ಅಧಿಕಾರಿಗಳನ್ನಾಗಿ ನೇಮಿಸುವಿ. [QE]
17. [QS]ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು; [QE][QS]ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು. [QE]