1. ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ;
ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ. |
2. ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು;
ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ. |
4. ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ
ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ. |
5. ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು;
ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು. |
6. * ಅಥವಾ ದೇವರೇ, ನಿನ್ನ ಸಿಂಹಾಸನವು. ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು;
ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ. |
7. ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ;
ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ. |
8. ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ
ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ. |
9. ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ;
ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ, ನಿನ್ನ ಬಲಭಾಗದಲ್ಲಿ ನಿಂತಿರುವಳು. |
13. ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ;
ಆಕೆಯು ಜರತಾರಿಯ † ಜರತಾರಿಯ ಚಿನ್ನದಿಂದ ನೇಯ್ದ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ. |
14. ಆಕೆಯು ಬೂಟೇದಾರಿ ‡ ಬೂಟೇದಾರಿ ಕಸೂತಿ ಕೆಲಸದ ವಸ್ತ್ರಗಳನ್ನು ಧರಿಸಿಕೊಂಡು,
ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ, ಅರಸನ ಬಳಿಗೆ ಬರುವರು. |
16. ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು;
ನೀನು ಅವರನ್ನು ಭೂಮಿಯ ಮೇಲೆಲ್ಲಾ ಅಧಿಕಾರಿಗಳನ್ನಾಗಿ ನೇಮಿಸುವಿ. |
17. ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು;
ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು. PE |