1. ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; [QBR] ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. [QBR] ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ. [QBR]
2. ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; [QBR] ನಿನ್ನ ಮಾತುಗಳು ಬಹು ಮಧುರ; [QBR] ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ. [QBR]
3. ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, [QBR] ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ. [QBR]
4. ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ [QBR] ಸಕಲ ವೈಭವದೊಡನೆ ವಾಹನರೂಢನಾಗಿ, [QBR] ವಿಜಯೋತ್ಸವದೊಡನೆ ಹೊರಡು. [QBR] ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ. [QBR]
5. ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; [QBR] ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; [QBR] ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು. [QBR]
6. [* ಅಥವಾ ದೇವರೇ, ನಿನ್ನ ಸಿಂಹಾಸನವು. ] ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; [QBR] ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ. [QBR]
7. ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; [QBR] ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, [QBR] ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ. [QBR]
8. ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ [QBR] ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; [QBR] ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ. [QBR]
9. ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; [QBR] ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ, [QBR] ನಿನ್ನ ಬಲಭಾಗದಲ್ಲಿ ನಿಂತಿರುವಳು. [QBR]
10. ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; [QBR] ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು. [QBR]
11. ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. [QBR] ಆತನೇ ನಿನಗೆ ಒಡೆಯನು; [QBR] ಆತನನ್ನು ಗೌರವಿಸು. [QBR]
12. ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; [QBR] ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು. [QBR]
13. ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; [QBR] ಆಕೆಯು ಜರತಾರಿಯ [† ಜರತಾರಿಯ ಚಿನ್ನದಿಂದ ನೇಯ್ದ] ವಸ್ತ್ರವನ್ನು ಧರಿಸಿಕೊಂಡಿದ್ದಾಳೆ. [QBR]
14. ಆಕೆಯು ಬೂಟೇದಾರಿ [‡ ಬೂಟೇದಾರಿ ಕಸೂತಿ ಕೆಲಸದ] ವಸ್ತ್ರಗಳನ್ನು ಧರಿಸಿಕೊಂಡು, [QBR] ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ, [QBR] ಅರಸನ ಬಳಿಗೆ ಬರುವರು. [QBR]
15. ಅವರು ಉಲ್ಲಾಸದಿಂದಲೂ, ಸಂತೋಷದಿಂದಲೂ ಬಂದು, [QBR] ಅರಮನೆಯೊಳಗೆ ಪ್ರವೇಶಿಸುವರು. [QBR]
16. ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು; [QBR] ನೀನು ಅವರನ್ನು ಭೂಮಿಯ ಮೇಲೆಲ್ಲಾ ಅಧಿಕಾರಿಗಳನ್ನಾಗಿ ನೇಮಿಸುವಿ. [QBR]
17. ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು; [QBR] ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು. [PE]