ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; [QBR] ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. [QBR]
2. ಆದುದರಿಂದ ಭೂಮಿಯು ಮಾರ್ಪಟ್ಟರೂ, [QBR] ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, [QBR] ನಮಗೇನೂ ಭಯವಿಲ್ಲ. [QBR]
3. ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? [QBR] ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ
4. ಒಂದು ನದಿ ಇದೆ; ಅದರ ಕಾಲುವೆಗಳು, [QBR] ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, [QBR] ದೇವರ ನಗರವನ್ನು ಸಂತೋಷಪಡಿಸುತ್ತವೆ. [QBR]
5. ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. [QBR] ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು. [QBR]
6. ಜನಾಂಗಗಳು ಕಳವಳಗೊಂಡವು; [QBR] ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು. [QBR]
7. ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; [QBR] ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ
8. ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; [QBR] ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ. [QBR]
9. ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; [QBR] ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; [QBR] [* ಅಥವಾ ಗುರಾಣಿಗಳನ್ನು. ಪ್ರಾಚೀನ ಗುರಾಣಿಗಳನ್ನು ಮರದಿಂದ ಮತ್ತು ಚರ್ಮದಿಂದ ತಯಾರಿಸಲಾಗುತ್ತಿತ್ತು ಮತ್ತು ಸಾಮಾನ್ಯವಾಗಿ ಆಲಿವ್ ಎಣ್ಣೆಯನ್ನು ಉಜ್ಜಲಾಗುತ್ತಿತ್ತು; ಇದರ ಪರಿಣಾಮವಾಗಿ ಅವುಗಳನ್ನು ಸುಲಭವಾಗಿ ದಹಿಸಬಹುದಾಗಿತ್ತು.] ರಥಗಳನ್ನು ದಹಿಸಿಬಿಟ್ಟಿದ್ದಾನೆ. [QBR]
10. “ [† ಅಥವಾ ಮೌನವಾಗಿರಿ.] ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; [QBR] ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ. [QBR]
11. ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; [QBR] ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 46 / 150
ಕೀರ್ತನೆಗಳು 46:73
1 ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. 2 ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ. 3 ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ 4 ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ. 5 ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು. 6 ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು. 7 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ 8 ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ. 9 ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; * ಅಥವಾ ಗುರಾಣಿಗಳನ್ನು. ಪ್ರಾಚೀನ ಗುರಾಣಿಗಳನ್ನು ಮರದಿಂದ ಮತ್ತು ಚರ್ಮದಿಂದ ತಯಾರಿಸಲಾಗುತ್ತಿತ್ತು ಮತ್ತು ಸಾಮಾನ್ಯವಾಗಿ ಆಲಿವ್ ಎಣ್ಣೆಯನ್ನು ಉಜ್ಜಲಾಗುತ್ತಿತ್ತು; ಇದರ ಪರಿಣಾಮವಾಗಿ ಅವುಗಳನ್ನು ಸುಲಭವಾಗಿ ದಹಿಸಬಹುದಾಗಿತ್ತು. ರಥಗಳನ್ನು ದಹಿಸಿಬಿಟ್ಟಿದ್ದಾನೆ. 10 ಅಥವಾ ಮೌನವಾಗಿರಿ. ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ. 11 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 46 / 150
Common Bible Languages
West Indian Languages
×

Alert

×

kannada Letters Keypad References