ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; [QBR] ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ. [QBR]
2. ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; [QBR] ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ. [QBR]
3. ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, [QBR] ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ. [QBR]
4. ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, [QBR] ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ
5. ದೇವರು ಜಯಘೋಷದಿಂದ ಏರಿದ್ದಾನೆ; [QBR] ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ. [QBR]
6. ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; [QBR] ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ. [QBR]
7. ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; [QBR] ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ. [QBR]
8. ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; [QBR] ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ. [QBR]
9. ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ [QBR] ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; [QBR] ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. [QBR] ಆತನೇ ಸರ್ವೋನ್ನತನು. [PE]

Notes

No Verse Added

Total 150 Chapters, Current Chapter 47 of Total Chapters 150
ಕೀರ್ತನೆಗಳು 47:5
1. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ;
ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.
2. ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ;
ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.
3. ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ,
ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.
4. ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ,
ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ
5. ದೇವರು ಜಯಘೋಷದಿಂದ ಏರಿದ್ದಾನೆ;
ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.
6. ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ;
ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ.
7. ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು;
ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.
8. ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ;
ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.
9. ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ
ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ;
ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ.
ಆತನೇ ಸರ್ವೋನ್ನತನು. PE
Total 150 Chapters, Current Chapter 47 of Total Chapters 150
×

Alert

×

kannada Letters Keypad References