ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನು ಮಹೋನ್ನತನು; [QBR] ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ. [QBR]
2. ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು [QBR] ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, [QBR] ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು. [QBR]
3. ದೇವರು ಅದರ ಕೊತ್ತಲುಗಳಲ್ಲಿ, [QBR] ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು. [QBR]
4. ರಾಜರು ಕೂಡಿಕೊಂಡರು; [QBR] ಅವರು ಒಗ್ಗಟ್ಟಾಗಿ ಬಂದರು. [QBR]
5. ನೋಡಿ ಬೆರಗಾದರು; [QBR] ತಲ್ಲಣಿಸಿ ಓಡಿಹೋದರು. [QBR]
6. ಕಂಪನವೂ ಹೆರುವವಳಂತೆ, [QBR] ವೇದನೆಯೂ ಅವರಿಗೆ ಉಂಟಾಯಿತು. [QBR]
7. ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ [QBR] ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು. [QBR]
8. ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; [QBR] ನಮ್ಮ ದೇವರೂ ಸೇನಾಧೀಶನೂ ಆಗಿರುವ [QBR] ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. [QBR] ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. ಸೆಲಾ
9. ದೇವರೇ, ನಾವು ನಿನ್ನ ಆಲಯದಲ್ಲಿ, [QBR] ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ; [QBR]
10. ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, [QBR] ಲೋಕವೆಲ್ಲಾ ನಿನ್ನನ್ನು ಹೊಗಳುವುದು. [QBR] ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು. [QBR]
11. ಚೀಯೋನ್ ಪಟ್ಟಣದವರು [* ಚೀಯೋನ್ ಪಟ್ಟಣದವರು ಮೂಲತಃ ಚೀಯೋನ್ ಪುತ್ರಿಯರು.] ಹರ್ಷಿಸಲಿ; [QBR] ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, [QBR] ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ. [QBR]
12. ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, [QBR] ಅದರ ಬುರುಜುಗಳನ್ನು ಲೆಕ್ಕಿಸಿರಿ. [QBR]
13. ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; [QBR] ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ. [QBR]
14. ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, [QBR] ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, [QBR] ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ. [PE]

Notes

No Verse Added

Total 150 Chapters, Current Chapter 48 of Total Chapters 150
ಕೀರ್ತನೆಗಳು 48:107
1. ಯೆಹೋವನು ಮಹೋನ್ನತನು;
ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.
2. ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು
ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ,
ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.
3. ದೇವರು ಅದರ ಕೊತ್ತಲುಗಳಲ್ಲಿ,
ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.
4. ರಾಜರು ಕೂಡಿಕೊಂಡರು;
ಅವರು ಒಗ್ಗಟ್ಟಾಗಿ ಬಂದರು.
5. ನೋಡಿ ಬೆರಗಾದರು;
ತಲ್ಲಣಿಸಿ ಓಡಿಹೋದರು.
6. ಕಂಪನವೂ ಹೆರುವವಳಂತೆ,
ವೇದನೆಯೂ ಅವರಿಗೆ ಉಂಟಾಯಿತು.
7. ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ
ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.
8. ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು;
ನಮ್ಮ ದೇವರೂ ಸೇನಾಧೀಶನೂ ಆಗಿರುವ
ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ.
ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. ಸೆಲಾ
9. ದೇವರೇ, ನಾವು ನಿನ್ನ ಆಲಯದಲ್ಲಿ,
ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ;
10. ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ,
ಲೋಕವೆಲ್ಲಾ ನಿನ್ನನ್ನು ಹೊಗಳುವುದು.
ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.
11. ಚೀಯೋನ್ ಪಟ್ಟಣದವರು * ಚೀಯೋನ್ ಪಟ್ಟಣದವರು ಮೂಲತಃ ಚೀಯೋನ್ ಪುತ್ರಿಯರು. ಹರ್ಷಿಸಲಿ;
ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ,
ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ.
12. ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ,
ಅದರ ಬುರುಜುಗಳನ್ನು ಲೆಕ್ಕಿಸಿರಿ.
13. ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ;
ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.
14. ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ,
ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು,
ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ. PE
Total 150 Chapters, Current Chapter 48 of Total Chapters 150
×

Alert

×

kannada Letters Keypad References