2. ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು
ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು. |
8. ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು;
ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. ಸೆಲಾ |
10. ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ,
ಲೋಕವೆಲ್ಲಾ ನಿನ್ನನ್ನು ಹೊಗಳುವುದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು. |
11. ಚೀಯೋನ್ ಪಟ್ಟಣದವರು * ಚೀಯೋನ್ ಪಟ್ಟಣದವರು ಮೂಲತಃ ಚೀಯೋನ್ ಪುತ್ರಿಯರು. ಹರ್ಷಿಸಲಿ;
ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ. |
14. ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ,
ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ. PE |