1. ಯೆಹೋವನು ಮಹೋನ್ನತನು; [QBR] ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ. [QBR]
2. ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು [QBR] ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, [QBR] ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು. [QBR]
3. ದೇವರು ಅದರ ಕೊತ್ತಲುಗಳಲ್ಲಿ, [QBR] ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು. [QBR]
4. ರಾಜರು ಕೂಡಿಕೊಂಡರು; [QBR] ಅವರು ಒಗ್ಗಟ್ಟಾಗಿ ಬಂದರು. [QBR]
5. ನೋಡಿ ಬೆರಗಾದರು; [QBR] ತಲ್ಲಣಿಸಿ ಓಡಿಹೋದರು. [QBR]
6. ಕಂಪನವೂ ಹೆರುವವಳಂತೆ, [QBR] ವೇದನೆಯೂ ಅವರಿಗೆ ಉಂಟಾಯಿತು. [QBR]
7. ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ [QBR] ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು. [QBR]
8. ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; [QBR] ನಮ್ಮ ದೇವರೂ ಸೇನಾಧೀಶನೂ ಆಗಿರುವ [QBR] ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. [QBR] ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. ಸೆಲಾ
9. ದೇವರೇ, ನಾವು ನಿನ್ನ ಆಲಯದಲ್ಲಿ, [QBR] ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ; [QBR]
10. ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, [QBR] ಲೋಕವೆಲ್ಲಾ ನಿನ್ನನ್ನು ಹೊಗಳುವುದು. [QBR] ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು. [QBR]
11. ಚೀಯೋನ್ ಪಟ್ಟಣದವರು [* ಚೀಯೋನ್ ಪಟ್ಟಣದವರು ಮೂಲತಃ ಚೀಯೋನ್ ಪುತ್ರಿಯರು.] ಹರ್ಷಿಸಲಿ; [QBR] ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, [QBR] ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ. [QBR]
12. ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, [QBR] ಅದರ ಬುರುಜುಗಳನ್ನು ಲೆಕ್ಕಿಸಿರಿ. [QBR]
13. ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; [QBR] ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ. [QBR]
14. ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, [QBR] ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, [QBR] ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ. [PE]