1. ಸಕಲ ದೇಶಗಳ ಜನರೇ, ಕೇಳಿರಿ; [QBR] ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ. [QBR]
2. ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ, [QBR] ನೀವೆಲ್ಲರೂ ಒಂದಾಗಿ ಬಂದು ಆಲಿಸಿರಿ. [QBR]
3. ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು; [QBR] ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿದೆ. [QBR]
4. ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, [QBR] ಅದರ ಗೂಡಾರ್ಥವನ್ನು ಪ್ರಕಟಿಸುವೆನು. [QBR]
5. ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? [QBR] ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು? [QBR]
6. ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; [QBR] ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ. [QBR]
7. ಆದರೆ ಯಾರಾದರೂ ತನ್ನ ಸಹೋದರನು [* ತನ್ನ ಸಹೋದರನು ಅಥವಾ ತನ್ನನ್ನು ತಾನು.] ಸಮಾಧಿಯಲ್ಲಿ ಸೇರದಂತೆ, [QBR] ದೇವರಿಗೆ ಈಡನ್ನು ಕೊಡಲಾರನು. [QBR]
8. ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, [QBR] ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು. [QBR]
9. ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, [QBR] ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು. [QBR]
10. ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; [QBR] ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. [QBR] ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ. [QBR]
11. ಅವರ ಸಮಾಧಿಯೇ [† ಸಮಾಧಿಯೇ ಅಂದರೆ ಅವರ ಅಂತರಾಲೋಚನೆಗಳು.] ಶಾಶ್ವತಮಂದಿರವು; [QBR] ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ, [QBR] ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ. [QBR]
12. ಆದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ; [QBR] ನಾಶವಾಗುವ ಪಶುಗಳಂತೆಯೇ ಇಲ್ಲವಾಗುತ್ತಾನೆ. [QBR]
13. ಮೂರ್ಖರಿಗೂ ಅವರ ಮಾತಿನಂತೆ [QBR] ನಡೆಯುವವರಿಗೂ ಇದೇ ಗತಿ. ಸೆಲಾ
14. ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; [QBR] ಮೃತ್ಯುವೇ ಅವರ ಪಾಲಕನು. [QBR] [‡ ಅಥವಾ ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡೆಸುವರು. ] ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, [QBR] ಅವರಿಗೆ ನಿವಾಸವಿಲ್ಲದ ಹಾಗೆ, [QBR] ಪಾತಾಳವು ಅವರ ರೂಪವನ್ನು ನಾಶಮಾಡುವುದು. [QBR]
15. ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, [QBR] ನನ್ನನ್ನು ಸ್ವೀಕಾರಮಾಡುವನು. ಸೆಲಾ
16. ಒಬ್ಬನ ಐಶ್ವರ್ಯವೂ, ಗೃಹವೈಭವವೂ [§ ಗೃಹವೈಭವವೂ ಅಥವಾ ಗೃಹಸಂಪತ್ತು.] [QBR] ವೃದ್ಧಿಯಾದಾಗ ಕಳವಳಪಡಬೇಡ. [QBR]
17. ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗುವುದಿಲ್ಲ; [QBR] ಅವನ ವೈಭವವು ಅವನೊಡನೆ ಹೋಗುವುದಿಲ್ಲ. [QBR]
18. ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ, [QBR] ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, [QBR] ಜನರಸ್ತುತಿಯಿಂದಲೂ ಕೂಡಿದವನಾದರೂ, [QBR]
19. ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ, [QBR] ಎಂದಿಗೂ ಬೆಳಕನ್ನು ನೋಡುವುದಿಲ್ಲ. [QBR]
20. ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ, [QBR] ನಶಿಸಿ ಹೋಗುವ ಪಶುಗಳಿಗೆ ಸಮಾನವಾಗಿ ಇಲ್ಲವಾಗುತ್ತಾನೆ. [PE]