3. ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು;
ಉದಯಕಾಲದಲ್ಲಿಯೇ ನನ್ನ * ಅಥವಾ ಯಜ್ಞವನ್ನು. ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು. |
7. ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ
ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು. |
8. ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ
ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು. |
9. ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ;
ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ. |
10. ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು;
ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು. |
11. ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು;
ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು. |
12. ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ;
ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು. PE |