ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ ನನ್ನ ಮೊರೆಗೆ ಕಿವಿಗೊಡು; [QBR] ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ. [QBR]
2. ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; [QBR] ನನ್ನ ಮೊರೆಯನ್ನು ಆಲಿಸು. [QBR]
3. ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; [QBR] ಉದಯಕಾಲದಲ್ಲಿಯೇ ನನ್ನ [* ಅಥವಾ ಯಜ್ಞವನ್ನು.] ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, [QBR] ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು. [QBR]
4. ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; [QBR] ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು. [QBR]
5. ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; [QBR] ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ. [QBR]
6. ಸುಳ್ಳು ಹೇಳುವವರನ್ನು ನಾಶಮಾಡುವಿ; [QBR] ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ. [QBR]
7. ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ [QBR] ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; [QBR] ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, [QBR] ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು. [QBR]
8. ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ [QBR] ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; [QBR] ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು. [QBR]
9. ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; [QBR] ಅವರು ನಾಲಿಗೆಯಿಂದ ಸವಿಮಾತನಾಡಿದರೂ, [QBR] ಅವರ ಹೃದಯವು ನಾಶಕರವಾದ ಗುಂಡಿ, [QBR] ಅವರ ಗಂಟಲು ತೆರೆದಿರುವ ಸಮಾಧಿ. [QBR]
10. ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; [QBR] ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; [QBR] ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; [QBR] ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು. [QBR]
11. ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; [QBR] ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. [QBR] ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು. [QBR]
12. ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; [QBR] ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 150
ಕೀರ್ತನೆಗಳು 5:64
1 ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ. 2 ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಆಲಿಸು. 3 ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ * ಅಥವಾ ಯಜ್ಞವನ್ನು. ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು. 4 ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು. 5 ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ. 6 ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ. 7 ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು. 8 ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು. 9 ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ. 10 ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು. 11 ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು. 12 ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 150
Common Bible Languages
West Indian Languages
×

Alert

×

kannada Letters Keypad References