3. {#3ದೇವರು ಸದಾಚಾರವನ್ನೇ ಮೆಚ್ಚುವನು }[PS]*ಆಸಾಫನ ಕೀರ್ತನೆ. *[PE][QS]ಬಲಿಷ್ಠ ದೇವರಾದ ಯೆಹೋವನು [QE][QS]ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, [QE][QS]ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ. [QE]
2. [QS]ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, [QE][QS]ದೇವರು ಪ್ರಕಾಶಿಸುತ್ತಾನೆ. [QE]
3. [QS]ನಮ್ಮ ದೇವರು ಪ್ರತ್ಯಕ್ಷನಾಗುವನು, [QE][QS]ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; [QE][QS]ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; [QE][QS]ಆತನ ಸುತ್ತಲು ಬಿರುಗಾಳಿ ಬೀಸುತ್ತದೆ. [QE]
4. [QS]ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು [QE][QS]ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ. [QE]
5. [QS]“ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು [QE][QS]ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ. [QE]
6. [QS]ದೇವರು ತಾನೇ ನ್ಯಾಯಾಧಿಪತಿ; [QE][QS]ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. [QE][QSS]ಸೆಲಾ [QSE]
7. [QS]ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, [QE][QS]ದೇವರಾದ ನಾನೇ ನಿಮ್ಮ ದೇವರು; [QE][QS]ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ. [QE]
8. [QS]ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; [QE][QS]ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ. [QE]
9. [QS]ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; [QE][QS]ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ. [QE]
10. [QS]ಕಾಡಿನಲ್ಲಿರುವ ಸರ್ವಮೃಗಗಳೂ, [QE][QS]ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ. [QE]
11. [QS] [* ಅಥವಾ ಆಕಾಶದ. ]ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; [QE][QS]ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು. [QE]
12. [QS]ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; [QE][QS]ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ. [QE]
13. [QS]ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, [QE][QS]ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ? [QE]
14. [QS]ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; [QE][QS]ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ. [QE]
15. [QS]ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; [QE][QS]ಆಗ ನನ್ನನ್ನು ಕೊಂಡಾಡುವಿರಿ. [QE]
16. [QS]ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, [QE][QS]“ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? [QE][QS]ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ? [QE]
17. [QS]ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; [QE][QS]ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ. [QE]
18. [QS]ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; [QE][QS]ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ. [QE]
19. [QS]ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; [QE][QS]ನಾಲಿಗೆಯು ಮೋಸವನ್ನು ನೇಯುತ್ತದೆ. [QE]
20. [QS]ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; [QE][QS]ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ. [QE]
21. [QS]ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. [QE][QS]ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. [QE][QS]ಈಗಲಾದರೋ ನಾನು ಎಲ್ಲವನ್ನು, [QE][QS]ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು. [QE]
22. [QS]ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; [QE][QS]ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. [QE][QS]ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ. [QE]
23. [QS]ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; [QE][QS]ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.” [QE]