ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಬಲಿಷ್ಠ ದೇವರಾದ ಯೆಹೋವನು [QBR] ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, [QBR] ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ. [QBR]
2. ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, [QBR] ದೇವರು ಪ್ರಕಾಶಿಸುತ್ತಾನೆ. [QBR]
3. ನಮ್ಮ ದೇವರು ಪ್ರತ್ಯಕ್ಷನಾಗುವನು, [QBR] ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; [QBR] ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; [QBR] ಆತನ ಸುತ್ತಲು ಬಿರುಗಾಳಿ ಬೀಸುತ್ತದೆ. [QBR]
4. ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು [QBR] ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ. [QBR]
5. “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು [QBR] ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ. [QBR]
6. ದೇವರು ತಾನೇ ನ್ಯಾಯಾಧಿಪತಿ; [QBR] ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ
7. ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, [QBR] ದೇವರಾದ ನಾನೇ ನಿಮ್ಮ ದೇವರು; [QBR] ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ. [QBR]
8. ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; [QBR] ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ. [QBR]
9. ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; [QBR] ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ. [QBR]
10. ಕಾಡಿನಲ್ಲಿರುವ ಸರ್ವಮೃಗಗಳೂ, [QBR] ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ. [QBR]
11. [* ಅಥವಾ ಆಕಾಶದ.] ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; [QBR] ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು. [QBR]
12. ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; [QBR] ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ. [QBR]
13. ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, [QBR] ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ? [QBR]
14. ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; [QBR] ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ. [QBR]
15. ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; [QBR] ಆಗ ನನ್ನನ್ನು ಕೊಂಡಾಡುವಿರಿ. [QBR]
16. ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, [QBR] “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? [QBR] ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ? [QBR]
17. ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; [QBR] ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ. [QBR]
18. ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; [QBR] ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ. [QBR]
19. ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; [QBR] ನಾಲಿಗೆಯು ಮೋಸವನ್ನು ನೇಯುತ್ತದೆ. [QBR]
20. ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; [QBR] ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ. [QBR]
21. ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. [QBR] ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. [QBR] ಈಗಲಾದರೋ ನಾನು ಎಲ್ಲವನ್ನು, [QBR] ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು. [QBR]
22. ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; [QBR] ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. [QBR] ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ. [QBR]
23. ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; [QBR] ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.” [PE]

Notes

No Verse Added

Total 150 Chapters, Current Chapter 50 of Total Chapters 150
ಕೀರ್ತನೆಗಳು 50:16
1. ಬಲಿಷ್ಠ ದೇವರಾದ ಯೆಹೋವನು
ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ,
ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.
2. ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ,
ದೇವರು ಪ್ರಕಾಶಿಸುತ್ತಾನೆ.
3. ನಮ್ಮ ದೇವರು ಪ್ರತ್ಯಕ್ಷನಾಗುವನು,
ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ;
ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ;
ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.
4. ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು
ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ.
5. “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು
ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ.
6. ದೇವರು ತಾನೇ ನ್ಯಾಯಾಧಿಪತಿ;
ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ
7. ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ,
ದೇವರಾದ ನಾನೇ ನಿಮ್ಮ ದೇವರು;
ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ.
8. ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ;
ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.
9. ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ;
ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.
10. ಕಾಡಿನಲ್ಲಿರುವ ಸರ್ವಮೃಗಗಳೂ,
ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ.
11. * ಅಥವಾ ಆಕಾಶದ. ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ;
ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು.
12. ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ;
ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ.
13. ನಾನು ಹೋರಿಗಳ ಮಾಂಸವನ್ನು ತಿನ್ನುವುದೂ,
ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ?
14. ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ;
ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
15. ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು;
ಆಗ ನನ್ನನ್ನು ಕೊಂಡಾಡುವಿರಿ.
16. ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ,
“ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು?
ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?
17. ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ;
ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.
18. ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ;
ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.
19. ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ;
ನಾಲಿಗೆಯು ಮೋಸವನ್ನು ನೇಯುತ್ತದೆ.
20. ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ;
ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ.
21. ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು.
ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ.
ಈಗಲಾದರೋ ನಾನು ಎಲ್ಲವನ್ನು,
ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.
22. ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ;
ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು.
ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.
23. ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು;
ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.” PE
Total 150 Chapters, Current Chapter 50 of Total Chapters 150
×

Alert

×

kannada Letters Keypad References