ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಬಲಿಷ್ಠ ದೇವರಾದ ಯೆಹೋವನು [QBR] ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, [QBR] ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ. [QBR]
2. ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, [QBR] ದೇವರು ಪ್ರಕಾಶಿಸುತ್ತಾನೆ. [QBR]
3. ನಮ್ಮ ದೇವರು ಪ್ರತ್ಯಕ್ಷನಾಗುವನು, [QBR] ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; [QBR] ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; [QBR] ಆತನ ಸುತ್ತಲು ಬಿರುಗಾಳಿ ಬೀಸುತ್ತದೆ. [QBR]
4. ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು [QBR] ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ. [QBR]
5. “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು [QBR] ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ. [QBR]
6. ದೇವರು ತಾನೇ ನ್ಯಾಯಾಧಿಪತಿ; [QBR] ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ
7. ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, [QBR] ದೇವರಾದ ನಾನೇ ನಿಮ್ಮ ದೇವರು; [QBR] ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ. [QBR]
8. ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; [QBR] ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ. [QBR]
9. ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; [QBR] ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ. [QBR]
10. ಕಾಡಿನಲ್ಲಿರುವ ಸರ್ವಮೃಗಗಳೂ, [QBR] ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ. [QBR]
11. [* ಅಥವಾ ಆಕಾಶದ.] ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; [QBR] ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು. [QBR]
12. ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; [QBR] ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ. [QBR]
13. ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, [QBR] ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ? [QBR]
14. ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; [QBR] ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ. [QBR]
15. ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; [QBR] ಆಗ ನನ್ನನ್ನು ಕೊಂಡಾಡುವಿರಿ. [QBR]
16. ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, [QBR] “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? [QBR] ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ? [QBR]
17. ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; [QBR] ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ. [QBR]
18. ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; [QBR] ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ. [QBR]
19. ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; [QBR] ನಾಲಿಗೆಯು ಮೋಸವನ್ನು ನೇಯುತ್ತದೆ. [QBR]
20. ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; [QBR] ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ. [QBR]
21. ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. [QBR] ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. [QBR] ಈಗಲಾದರೋ ನಾನು ಎಲ್ಲವನ್ನು, [QBR] ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು. [QBR]
22. ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; [QBR] ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. [QBR] ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ. [QBR]
23. ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; [QBR] ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.” [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 50 / 150
ಕೀರ್ತನೆಗಳು 50:169
1 ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ. 2 ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, ದೇವರು ಪ್ರಕಾಶಿಸುತ್ತಾನೆ. 3 ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ. 4 ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ. 5 “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ. 6 ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ 7 ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ. 8 ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ. 9 ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ. 10 ಕಾಡಿನಲ್ಲಿರುವ ಸರ್ವಮೃಗಗಳೂ, ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ. 11 * ಅಥವಾ ಆಕಾಶದ. ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು. 12 ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ. 13 ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ? 14 ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ. 15 ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ. 16 ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ? 17 ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ. 18 ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ. 19 ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; ನಾಲಿಗೆಯು ಮೋಸವನ್ನು ನೇಯುತ್ತದೆ. 20 ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ. 21 ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು. 22 ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ. 23 ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 50 / 150
Common Bible Languages
West Indian Languages
×

Alert

×

kannada Letters Keypad References