1. ಬಲಿಷ್ಠ ದೇವರಾದ ಯೆಹೋವನು
ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ. |
3. ನಮ್ಮ ದೇವರು ಪ್ರತ್ಯಕ್ಷನಾಗುವನು,
ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ. |
5. “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು
ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ. |
7. ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ,
ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ. |
8. ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ;
ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ. |
16. ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ,
“ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ? |
21. ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು.
ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು. |
22. ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ;
ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ. |
23. ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು;
ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.” PE |