3. {#3ಪಾಪಕ್ಷಮಾಪಣೆಗಾಗಿ ವಿಜ್ಞಾಪನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಬತ್ಷೆಬಳ ಬಳಿಗೆ ಹೋದ ಮೇಲೆ ಪ್ರವಾದಿಯಾದ ನಾತಾನನು ಎಚ್ಚರಿಸಿದಾಗ ರಚಿಸಿದ ಕೀರ್ತನೆ. *[PE][PS]ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; [PE][QS]ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು. [QE]
2. [QS]ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; [QE][QS]ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು. [QE]
3. [QS]ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; [QE][QS]ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. [QE]
4. [QS]ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; [QE][QS]ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. [QE][QS]ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ. [QE]
5. [QS]ಹುಟ್ಟಿದಂದಿನಿಂದ ನಾನು ಪಾಪಿಯೇ; [QE][QS]ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ. [QE]
6. [QS]ಯಥಾರ್ಥಚಿತ್ತವೇ ನಿನಗೆ ಸಂತೋಷ; [QE][QS]ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು. [QE]
7. [QS]ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ [QE][QS]ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; [QE][QS]ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು. [QE]
8. [QS]ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; [QE][QS]ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು. [QE]
9. [QS]ನನ್ನ ದೋಷಕ್ಕೆ ವಿಮುಖನಾಗು; [QE][QS]ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು. [QE]
10. [QS]ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; [QE][QS]ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು. [QE]
11. [QS]ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; [QE][QS]ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ. [QE]
12. [QS]ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; [QE][QS]ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು. [QE]
13. [QS]ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; [QE][QS]ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು. [QE]
14. [QS]ದೇವರೇ, ನನ್ನ ರಕ್ಷಣಾ ಕರ್ತನೇ, [QE][QS]ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; [QE][QS]ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು. [QE]
15. [QS]ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ [QE][QS]ನನ್ನ ತುಟಿಗಳನ್ನು ತೆರೆಯಮಾಡು. [QE]
16. [QS]ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; [QE][QS]ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ. [QE]
17. [QS] [* ಅಥವಾ ಓ ದೇವರೇ, ನನ್ನ ಯಜ್ಞವು ಕುಗ್ಗಿದ ಮನಸ್ಸೇ. ]ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; [QE][QS]ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ. [QE]
18. [QS]ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; [QE][QS]ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು. [QE]
19. [QS]ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ, [QE][QS]ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು. [QE][QS]ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು. [QE]