ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; [QBR] ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು. [QBR]
2. ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; [QBR] ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು. [QBR]
3. ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; [QBR] ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. [QBR]
4. ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; [QBR] ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. [QBR] ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ. [QBR]
5. ಹುಟ್ಟಿದಂದಿನಿಂದ ನಾನು ಪಾಪಿಯೇ; [QBR] ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ. [QBR]
6. ಯಥಾರ್ಥಚಿತ್ತವೇ ನಿನಗೆ ಸಂತೋಷ; [QBR] ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು. [QBR]
7. ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ [QBR] ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; [QBR] ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು. [QBR]
8. ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; [QBR] ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು. [QBR]
9. ನನ್ನ ದೋಷಕ್ಕೆ ವಿಮುಖನಾಗು; [QBR] ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು. [QBR]
10. ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; [QBR] ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು. [QBR]
11. ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; [QBR] ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ. [QBR]
12. ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; [QBR] ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು. [QBR]
13. ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; [QBR] ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು. [QBR]
14. ದೇವರೇ, ನನ್ನ ರಕ್ಷಣಾ ಕರ್ತನೇ, [QBR] ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; [QBR] ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು. [QBR]
15. ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ [QBR] ನನ್ನ ತುಟಿಗಳನ್ನು ತೆರೆಯಮಾಡು. [QBR]
16. ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; [QBR] ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ. [QBR]
17. [* ಅಥವಾ ಓ ದೇವರೇ, ನನ್ನ ಯಜ್ಞವು ಕುಗ್ಗಿದ ಮನಸ್ಸೇ.] ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; [QBR] ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ. [QBR]
18. ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; [QBR] ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು. [QBR]
19. ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ, [QBR] ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು. [QBR] ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು. [PE]

Notes

No Verse Added

Total 150 Chapters, Current Chapter 51 of Total Chapters 150
ಕೀರ್ತನೆಗಳು 51:48
1. ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು;
ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.
2. ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು;
ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.
3. ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ;
ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
4. ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ;
ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ.
ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
5. ಹುಟ್ಟಿದಂದಿನಿಂದ ನಾನು ಪಾಪಿಯೇ;
ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.
6. ಯಥಾರ್ಥಚಿತ್ತವೇ ನಿನಗೆ ಸಂತೋಷ;
ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.
7. ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ
ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು;
ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.
8. ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು;
ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.
9. ನನ್ನ ದೋಷಕ್ಕೆ ವಿಮುಖನಾಗು;
ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.
10. ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು;
ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.
11. ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ;
ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.
12. ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು;
ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.
13. ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು;
ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.
14. ದೇವರೇ, ನನ್ನ ರಕ್ಷಣಾ ಕರ್ತನೇ,
ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು;
ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.
15. ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ
ನನ್ನ ತುಟಿಗಳನ್ನು ತೆರೆಯಮಾಡು.
16. ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು;
ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.
17. * ಅಥವಾ ದೇವರೇ, ನನ್ನ ಯಜ್ಞವು ಕುಗ್ಗಿದ ಮನಸ್ಸೇ. ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ;
ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.
18. ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು;
ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು.
19. ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ,
ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು.
ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು. PE
Total 150 Chapters, Current Chapter 51 of Total Chapters 150
×

Alert

×

kannada Letters Keypad References