ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {ದುಷ್ಟಾಧಿಕಾರಿಯ ದುರ್ಸ್ವಭಾವದ ಖಂಡನೆ} [PS] [* ಅಥವಾ ಓ ಪರಾಕ್ರಮಿಯೇ, ನೀನು ದೇವರ ಮನುಷ್ಯನಿಗೆ ಮಾಡಿದ ಕಾರ್ಯದ ಬಗ್ಗೆ ಹಿಗ್ಗುವದೇನು?] ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? [QBR] ದೇವರ ಕೃಪೆಯು ಯಾವಾಗಲೂ ಇರುವುದು. [QBR]
2. ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ [QBR] ಅಪಾಯಗಳನ್ನೇ ಕಲ್ಪಿಸುತ್ತದೆ. [QBR]
3. ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; [QBR] ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. ಸೆಲಾ
4. ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ. [QBR]
5. ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; [QBR] ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; [QBR] ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. [QBR]
6. ನೀತಿವಂತರು ಅದನ್ನು ನೋಡಿ ಭಯಪಡುವರು; [QBR] ಅವರು ಪರಿಹಾಸ್ಯಮಾಡುತ್ತಾ, [QBR]
7. “ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, [QBR] [† ಅಥವಾ ತನ್ನ ದುಷ್ಟಕಾರ್ಯಗಳಲ್ಲಿ ಆಧಿಕ ಬಲಿಷ್ಠನಾಗುತ್ತಾ ಬಂದನು.] ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು. [QBR]
8. ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; [QBR] ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು. [QBR]
9. ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; [QBR] ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 52 / 150
ಕೀರ್ತನೆಗಳು 52:160
ದುಷ್ಟಾಧಿಕಾರಿಯ ದುರ್ಸ್ವಭಾವದ ಖಂಡನೆ 1 * ಅಥವಾ ಓ ಪರಾಕ್ರಮಿಯೇ, ನೀನು ದೇವರ ಮನುಷ್ಯನಿಗೆ ಮಾಡಿದ ಕಾರ್ಯದ ಬಗ್ಗೆ ಹಿಗ್ಗುವದೇನು? ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು. 2 ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ. 3 ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. ಸೆಲಾ 4 ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ. 5 ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. 6 ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ, 7 “ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ಅಥವಾ ತನ್ನ ದುಷ್ಟಕಾರ್ಯಗಳಲ್ಲಿ ಆಧಿಕ ಬಲಿಷ್ಠನಾಗುತ್ತಾ ಬಂದನು. ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು. 8 ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು. 9 ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 52 / 150
Common Bible Languages
West Indian Languages
×

Alert

×

kannada Letters Keypad References