ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#1ದುಷ್ಟಾಧಿಕಾರಿಯ ದುರ್ಸ್ವಭಾವದ ಖಂಡನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಅಹೀಮೆಲೆಕನ ಮನೆಗೆ ಬಂದ ವರ್ತಮಾನವನ್ನು ಎದೋಮ್ಯನಾದ ದೋಯೇಗನು ಸೌಲನಿಗೆ ತಿಳಿಸಿದಾಗ ದಾವೀದನು ರಚಿಸಿದ ಪದ್ಯ. *[PE][QS] [* ಅಥವಾ ಓ ಪರಾಕ್ರಮಿಯೇ, ನೀನು ದೇವರ ಮನುಷ್ಯನಿಗೆ ಮಾಡಿದ ಕಾರ್ಯದ ಬಗ್ಗೆ ಹಿಗ್ಗುವದೇನು? ]ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? [QE][QS]ದೇವರ ಕೃಪೆಯು ಯಾವಾಗಲೂ ಇರುವುದು. [QE]
2. [QS]ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ [QE][QS]ಅಪಾಯಗಳನ್ನೇ ಕಲ್ಪಿಸುತ್ತದೆ. [QE]
3. [QS]ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; [QE][QS]ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. [QE][QSS]ಸೆಲಾ [QSE]
4. [QS]ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ. [QE]
5. [QS]ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; [QE][QS]ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; [QE][QS]ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. [QE]
6. [QS]ನೀತಿವಂತರು ಅದನ್ನು ನೋಡಿ ಭಯಪಡುವರು; [QE][QS]ಅವರು ಪರಿಹಾಸ್ಯಮಾಡುತ್ತಾ, [QE]
7. [QS]“ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, [QE][QS][† ಅಥವಾ ತನ್ನ ದುಷ್ಟಕಾರ್ಯಗಳಲ್ಲಿ ಆಧಿಕ ಬಲಿಷ್ಠನಾಗುತ್ತಾ ಬಂದನು. ]ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು. [QE]
8. [QS]ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; [QE][QS]ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು. [QE]
9. [QS]ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; [QE][QS]ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 52 / 150
ದುಷ್ಟಾಧಿಕಾರಿಯ ದುರ್ಸ್ವಭಾವದ ಖಂಡನೆ 1 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಅಹೀಮೆಲೆಕನ ಮನೆಗೆ ಬಂದ ವರ್ತಮಾನವನ್ನು ಎದೋಮ್ಯನಾದ ದೋಯೇಗನು ಸೌಲನಿಗೆ ತಿಳಿಸಿದಾಗ ದಾವೀದನು ರಚಿಸಿದ ಪದ್ಯ. * * ಅಥವಾ ಓ ಪರಾಕ್ರಮಿಯೇ, ನೀನು ದೇವರ ಮನುಷ್ಯನಿಗೆ ಮಾಡಿದ ಕಾರ್ಯದ ಬಗ್ಗೆ ಹಿಗ್ಗುವದೇನು? ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು. 2 ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ. 3 ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. QSS ಸೆಲಾ SE 4 ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ. 5 ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. 6 ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ, 7 “ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ಅಥವಾ ತನ್ನ ದುಷ್ಟಕಾರ್ಯಗಳಲ್ಲಿ ಆಧಿಕ ಬಲಿಷ್ಠನಾಗುತ್ತಾ ಬಂದನು. ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು. 8 ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು. 9 ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 52 / 150
×

Alert

×

Kannada Letters Keypad References