1. ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ;
ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. |
2. ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು
ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, |
4. ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ?
* ಅಥವಾ ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ; ದೇವರನ್ನು ಪ್ರಾರ್ಥಿಸುವುದಿಲ್ಲ. |
5. ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ,
ಅವರು ಪಕ್ಕನೆ ಭಯಭ್ರಾಂತರಾದರು; † ಅಥವಾ ನಿಮಗೆ ಮುತ್ತಿಗೆಹಾಕಿದವರನ್ನು. ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ‡ ಅಥವಾ ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅವಮಾನಪಡಿಸಿದ್ದೀರಿ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು. |
6. ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ.
ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು. PE |