ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ದುಷ್ಟನಾಸ್ತಿಕರಿಂದ ತಪ್ಪಿಸಿ ಕಾಪಾಡಬೇಕೆಂದು ಪ್ರಾರ್ಥಿಸುವುದು }[PS]*ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಪದ್ಯ. *[PE][QS]ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; [QE][QS]ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; [QE][QS]ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. [QE]
2. [QS]ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು [QE][QS]ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, [QE]
3. [QS]ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ; [QE][QS]ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ. [QE]
4. [QS]ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? [QE][QS][* ಅಥವಾ ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ]ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ; [QE][QS]ದೇವರನ್ನು ಪ್ರಾರ್ಥಿಸುವುದಿಲ್ಲ. [QE]
5. [QS]ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, [QE][QS]ಅವರು ಪಕ್ಕನೆ ಭಯಭ್ರಾಂತರಾದರು; [QE][QS][† ಅಥವಾ ನಿಮಗೆ ಮುತ್ತಿಗೆಹಾಕಿದವರನ್ನು. ]ದುಷ್ಟರನ್ನು ದೇವರು ಸಂಹರಿಸಿ [QE][QS]ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. [QE][QS] [‡ ಅಥವಾ ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅವಮಾನಪಡಿಸಿದ್ದೀರಿ. ]ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು. [QE]
6. [QS]ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. [QE][QS]ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, [QE][QS]ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; [QE][QS]ಇಸ್ರಾಯೇಲರು ಹರ್ಷಿಸುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 53 / 150
ದುಷ್ಟನಾಸ್ತಿಕರಿಂದ ತಪ್ಪಿಸಿ ಕಾಪಾಡಬೇಕೆಂದು ಪ್ರಾರ್ಥಿಸುವುದು 3 *ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಪದ್ಯ. *ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. 2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, 3 ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ; ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ. 4 ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? * ಅಥವಾ ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ; ದೇವರನ್ನು ಪ್ರಾರ್ಥಿಸುವುದಿಲ್ಲ. 5 ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ಅಥವಾ ನಿಮಗೆ ಮುತ್ತಿಗೆಹಾಕಿದವರನ್ನು. ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ಅಥವಾ ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅವಮಾನಪಡಿಸಿದ್ದೀರಿ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು. 6 ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 53 / 150
×

Alert

×

Kannada Letters Keypad References