ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; [QBR] ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು. [QBR]
2. ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; [QBR] ನನ್ನ ಮಾತುಗಳಿಗೆ ಕಿವಿಗೊಡು. [QBR]
3. [* ಅಥವಾ ಅನ್ಯರು.] ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; [QBR] ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. [QBR] ಅವರು ದೇವರನ್ನು ಲಕ್ಷಿಸುವುದೇ ಇಲ್ಲ. ಸೆಲಾ
4. ಇಗೋ, ದೇವರೇ ನನಗೆ ಸಹಾಯಕನು; [QBR] [† ಕೆಲವು ಹಸ್ತಪ್ರತಿಗಳಲ್ಲಿ ನನ್ನ ಪ್ರಾಣವನ್ನು ಕಾಪಾಡುವವರೊಂದಿಗೆ ಕರ್ತನು ಇದ್ದಾನೆ.] ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು. [QBR]
5. ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. [QBR] ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು. [QBR]
6. ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; [QBR] ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು. [QBR]
7. ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ, [QBR] ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ. [PE]

Notes

No Verse Added

Total 150 Chapters, Current Chapter 54 of Total Chapters 150
ಕೀರ್ತನೆಗಳು 54:7
1. ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು;
ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.
2. ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು;
ನನ್ನ ಮಾತುಗಳಿಗೆ ಕಿವಿಗೊಡು.
3. * ಅಥವಾ ಅನ್ಯರು. ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ;
ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ.
ಅವರು ದೇವರನ್ನು ಲಕ್ಷಿಸುವುದೇ ಇಲ್ಲ. ಸೆಲಾ
4. ಇಗೋ, ದೇವರೇ ನನಗೆ ಸಹಾಯಕನು;
ಕೆಲವು ಹಸ್ತಪ್ರತಿಗಳಲ್ಲಿ ನನ್ನ ಪ್ರಾಣವನ್ನು ಕಾಪಾಡುವವರೊಂದಿಗೆ ಕರ್ತನು ಇದ್ದಾನೆ. ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು.
5. ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ.
ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು.
6. ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು;
ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.
7. ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ,
ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ. PE
Total 150 Chapters, Current Chapter 54 of Total Chapters 150
×

Alert

×

kannada Letters Keypad References