3. {#3ದ್ರೋಹಿಗಳ ನಿರ್ಮೂಲಕ್ಕಾಗಿ ಪ್ರಾರ್ಥನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಪದ್ಯ. *[PE][QS]ದೇವರೇ, ನನ್ನ ಮೊರೆಯನ್ನು ಲಾಲಿಸು; [QE][QS]ನನ್ನ ವಿಜ್ಞಾಪನೆಗೆ ಕಿವಿಮುಚ್ಚಿಕೊಳ್ಳಬೇಡ. [QE]
2. [QS]ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು. [QE]
3. [QS]ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ, [QE][QS]ಹೊಯ್ದಾಡುತ್ತಾ ನರಳುತ್ತಿದ್ದೇನೆ. [QE][QS]ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ, [QE][QS]ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ. [QE]
4. [QS]ನನ್ನ ಹೃದಯವು ನೊಂದು ಬೆಂದುಹೋಗಿದೆ; [QE][QS]ಮರಣಭಯವು ನನ್ನನ್ನು ಆವರಿಸಿಕೊಂಡಿದೆ. [QE]
5. [QS]ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ. [QE]
6. [QS]ನಾನು, “ಆಹಾ, ನನಗೆ ರೆಕ್ಕೆಗಳಿದ್ದರೆ ಪಾರಿವಾಳದಂತೆ ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು. [QE]
7. [QS]ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು, [QE]
8. [QS]ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು” ಅಂದುಕೊಂಡೆನು. [QE][QSS]ಸೆಲಾ [QSE]
9. [QS]ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. [QE][QS]ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ. [QE]
10. [QS]ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; [QE][QS]ಊರೊಳಗೆ ಕೇಡು, ತೊಂದರೆಗಳು ಪ್ರಬಲವಾಗಿವೆ. [QE]
11. [QS]ಅದರೊಳಗೆಲ್ಲಾ ನಾಶನವೇ; [QE][QS]ದಬ್ಬಾಳಿಕೆ ಮತ್ತು ವಂಚನೆ ಅದರ ಬೀದಿಗಳಿಂದ ತೊಲಗವು. [QE]
12. [QS]ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; [QE][QS]ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು. [QE]
13. [QS]ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ. [QE]
14. [QS]ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ [QE][QS]ಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ. [QE]
15. [QS]ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. [QE][QS]ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ. [QE]
16. [QS]ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು; [QE][QS]ಆತನು ನನ್ನನ್ನು ರಕ್ಷಿಸುವನು. [QE]
17. [QS]ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. [QE][QS]ಆತನು ಹೇಗೂ ನನ್ನ ಮೊರೆಯನ್ನು ಕೇಳಿ [QE]
18. [QS]ನನ್ನ ವಿರೋಧಿಗಳು ಅನೇಕರಿದ್ದರೂ [QE][QS]ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು. [QE]
19. [QS]ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು [QE][QS]ಅವರನ್ನು ತಗ್ಗಿಸಿಬಿಡುವನು. [QE][QSS]ಸೆಲಾ [QSE] [QS]ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವುದಿಲ್ಲ. [QE]
20. [QS]ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ [QE][QS]ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ. [QE]
21. [QS]ಅವನ ಮಾತು ಬೆಣ್ಣೆಯಂತೆ ನುಣುಪು; [QE][QS]ಹೃದಯವೋ ಕಲಹಮಯ. [QE][QS]ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ. [QE]
22. [QS]ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; [QE][QS]ಆತನು ನಿನ್ನನ್ನು ಉದ್ಧಾರಮಾಡುವನು. [QE][QS]ನೀತಿವಂತನನ್ನು ಎಂದಿಗೂ ಕದಲಗೊಡಿಸನು. [QE]
23. [QS]ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. [QE][QS]ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. [QE][QS]ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು. [QE]