ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಶತ್ರುಪೀಡಿತರಾದ ಭಕ್ತರ ಪ್ರಾರ್ಥನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೋನತ್ ಎಲೆಮ್ ರೆಹೋಕೀಮ್ ಎಂಬ ರಾಗ; ದಾವೀದನು ಗತ್ ಎಂಬ ಊರಲ್ಲಿ ಫಿಲಿಷ್ಟಿಯರ ಕೈವಶವಾದಾಗ ರಚಿಸಿದ ಕಾವ್ಯ. *[PE][QS]ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. [QE][QS]ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ. [QE]
2. [QS]ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; [QE][QS]ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು. [QE]
3. [QS]ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು. [QE]
4. [QS]ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; [QE][QS]ದೇವರನ್ನು ನಂಬಿ ನಿರ್ಭಯದಿಂದಿರುವೆನು. [QE][QS]ನರಪ್ರಾಣಿಗಳು ನನಗೆ ಏನು ಮಾಡಾರು? [QE]
5. [QS]ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; [QE][QS]ಅವರು ಬಗೆಯುವುದೆಲ್ಲ ನನಗೆ ಕೇಡೇ. [QE]
6. [QS]ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, [QE][QS]ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ. [QE]
7. [QS]ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? [QE][QS]ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು. [QE]
8. [QS]ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. [QE][QS]ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; [QE][QS]ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ. [QE]
9. [QS]ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; [QE][QS][* ಅಥವಾ ನನಗೆ ಇದು ತಿಳಿದಿದೆ ಯಾಕೆಂದರೆ ದೇವರು ನನ್ನ ಕಡೆಯಲ್ಲಿದ್ದಾನೆ. ]ದೇವರು ನನ್ನ ಸಂಗಡ ಇರುವುದು ನಿಶ್ಚಯ. [QE]
10. [QS]ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. [QE][QS]ಯೆಹೋವನಲ್ಲಿ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. [QE]
11. [QS]ದೇವರನ್ನು ನಂಬಿ ನಿರ್ಭಯದಿಂದಿರುವೆನು; [QE][QS]ನರಪ್ರಾಣಿಗಳು ನನಗೆ ಏನು ಮಾಡಾರು? [QE]
12. [QS]ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; [QE][QS]ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು. [QE]
13. [QS]ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು [QE][QS]ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, [QE][QS]ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 56 / 150
ಶತ್ರುಪೀಡಿತರಾದ ಭಕ್ತರ ಪ್ರಾರ್ಥನೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೋನತ್ ಎಲೆಮ್ ರೆಹೋಕೀಮ್ ಎಂಬ ರಾಗ; ದಾವೀದನು ಗತ್ ಎಂಬ ಊರಲ್ಲಿ ಫಿಲಿಷ್ಟಿಯರ ಕೈವಶವಾದಾಗ ರಚಿಸಿದ ಕಾವ್ಯ. *ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ. 2 ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು. 3 ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು. 4 ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು? 5 ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; ಅವರು ಬಗೆಯುವುದೆಲ್ಲ ನನಗೆ ಕೇಡೇ. 6 ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ. 7 ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು. 8 ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ. 9 ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; * ಅಥವಾ ನನಗೆ ಇದು ತಿಳಿದಿದೆ ಯಾಕೆಂದರೆ ದೇವರು ನನ್ನ ಕಡೆಯಲ್ಲಿದ್ದಾನೆ. ದೇವರು ನನ್ನ ಸಂಗಡ ಇರುವುದು ನಿಶ್ಚಯ. 10 ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. ಯೆಹೋವನಲ್ಲಿ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. 11 ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಏನು ಮಾಡಾರು? 12 ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು. 13 ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 56 / 150
×

Alert

×

Kannada Letters Keypad References