ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. [QBR] ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ. [QBR]
2. ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; [QBR] ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು. [QBR]
3. ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು. [QBR]
4. ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; [QBR] ದೇವರನ್ನು ನಂಬಿ ನಿರ್ಭಯದಿಂದಿರುವೆನು. [QBR] ನರಪ್ರಾಣಿಗಳು ನನಗೆ ಏನು ಮಾಡಾರು? [QBR]
5. ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; [QBR] ಅವರು ಬಗೆಯುವುದೆಲ್ಲ ನನಗೆ ಕೇಡೇ. [QBR]
6. ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, [QBR] ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ. [QBR]
7. ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? [QBR] ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು. [QBR]
8. ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. [QBR] ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; [QBR] ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ. [QBR]
9. ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; [QBR] [* ಅಥವಾ ನನಗೆ ಇದು ತಿಳಿದಿದೆ ಯಾಕೆಂದರೆ ದೇವರು ನನ್ನ ಕಡೆಯಲ್ಲಿದ್ದಾನೆ.] ದೇವರು ನನ್ನ ಸಂಗಡ ಇರುವುದು ನಿಶ್ಚಯ. [QBR]
10. ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. [QBR] ಯೆಹೋವನಲ್ಲಿ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. [QBR]
11. ದೇವರನ್ನು ನಂಬಿ ನಿರ್ಭಯದಿಂದಿರುವೆನು; [QBR] ನರಪ್ರಾಣಿಗಳು ನನಗೆ ಏನು ಮಾಡಾರು? [QBR]
12. ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; [QBR] ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು. [QBR]
13. ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು [QBR] ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, [QBR] ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ. [PE]

Notes

No Verse Added

Total 150 Chapters, Current Chapter 56 of Total Chapters 150
ಕೀರ್ತನೆಗಳು 56:3
1. ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ.
ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.
2. ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ;
ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು.
3. ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.
4. ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು;
ದೇವರನ್ನು ನಂಬಿ ನಿರ್ಭಯದಿಂದಿರುವೆನು.
ನರಪ್ರಾಣಿಗಳು ನನಗೆ ಏನು ಮಾಡಾರು?
5. ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ;
ಅವರು ಬಗೆಯುವುದೆಲ್ಲ ನನಗೆ ಕೇಡೇ.
6. ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ,
ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ.
7. ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ?
ದೇವರೇ, ರೌದ್ರದಿಂದ ಜನಾಂಗಗಳನ್ನು ಉರುಳಿಸಿಬಿಡು.
8. ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ.
ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ;
ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.
9. ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು;
* ಅಥವಾ ನನಗೆ ಇದು ತಿಳಿದಿದೆ ಯಾಕೆಂದರೆ ದೇವರು ನನ್ನ ಕಡೆಯಲ್ಲಿದ್ದಾನೆ. ದೇವರು ನನ್ನ ಸಂಗಡ ಇರುವುದು ನಿಶ್ಚಯ.
10. ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.
ಯೆಹೋವನಲ್ಲಿ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.
11. ದೇವರನ್ನು ನಂಬಿ ನಿರ್ಭಯದಿಂದಿರುವೆನು;
ನರಪ್ರಾಣಿಗಳು ನನಗೆ ಏನು ಮಾಡಾರು?
12. ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು;
ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.
13. ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು
ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ,
ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ. PE
Total 150 Chapters, Current Chapter 56 of Total Chapters 150
×

Alert

×

kannada Letters Keypad References