ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. [QBR] ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ. [QBR]
2. ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; [QBR] ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು. [QBR]
3. ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು. [QBR]
4. ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; [QBR] ದೇವರನ್ನು ನಂಬಿ ನಿರ್ಭಯದಿಂದಿರುವೆನು. [QBR] ನರಪ್ರಾಣಿಗಳು ನನಗೆ ಏನು ಮಾಡಾರು? [QBR]
5. ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; [QBR] ಅವರು ಬಗೆಯುವುದೆಲ್ಲ ನನಗೆ ಕೇಡೇ. [QBR]
6. ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, [QBR] ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ. [QBR]
7. ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? [QBR] ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು. [QBR]
8. ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. [QBR] ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; [QBR] ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ. [QBR]
9. ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; [QBR] [* ಅಥವಾ ನನಗೆ ಇದು ತಿಳಿದಿದೆ ಯಾಕೆಂದರೆ ದೇವರು ನನ್ನ ಕಡೆಯಲ್ಲಿದ್ದಾನೆ.] ದೇವರು ನನ್ನ ಸಂಗಡ ಇರುವುದು ನಿಶ್ಚಯ. [QBR]
10. ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. [QBR] ಯೆಹೋವನಲ್ಲಿ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. [QBR]
11. ದೇವರನ್ನು ನಂಬಿ ನಿರ್ಭಯದಿಂದಿರುವೆನು; [QBR] ನರಪ್ರಾಣಿಗಳು ನನಗೆ ಏನು ಮಾಡಾರು? [QBR]
12. ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; [QBR] ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು. [QBR]
13. ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು [QBR] ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, [QBR] ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 56 / 150
ಕೀರ್ತನೆಗಳು 56:40
1 ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ. 2 ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು. 3 ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು. 4 ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು? 5 ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; ಅವರು ಬಗೆಯುವುದೆಲ್ಲ ನನಗೆ ಕೇಡೇ. 6 ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ. 7 ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು. 8 ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ. 9 ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; * ಅಥವಾ ನನಗೆ ಇದು ತಿಳಿದಿದೆ ಯಾಕೆಂದರೆ ದೇವರು ನನ್ನ ಕಡೆಯಲ್ಲಿದ್ದಾನೆ. ದೇವರು ನನ್ನ ಸಂಗಡ ಇರುವುದು ನಿಶ್ಚಯ. 10 ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. ಯೆಹೋವನಲ್ಲಿ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. 11 ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಏನು ಮಾಡಾರು? 12 ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು. 13 ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 56 / 150
Common Bible Languages
West Indian Languages
×

Alert

×

kannada Letters Keypad References