ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ದೇವರೇ, ಕರುಣಿಸು, ನನ್ನನ್ನು ಕರುಣಿಸು. [QBR] ನೀನೇ ನನ್ನ ಆಶ್ರಯಸ್ಥಾನವಲ್ಲವೇ! [QBR] ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು. [QBR]
2. ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, [QBR] ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು. [QBR]
3. ಆತನು ಪರಲೋಕದಿಂದ ಆಲಿಸಿ, [QBR] ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ಸೆಲಾ ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು. [QBR]
4. ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; [QBR] ದುರಾಶೆಯಿಂದ ಕಬಳಿಸುವಂತಹ [* ದುರಾಶೆಯಿಂದ ಕಬಳಿಸುವಂತಹ ಅಥವಾ ಬೆಂಕಿಕಾರುವ. ] ಮನುಷ್ಯರ ನಡುವೆ ಬಿದ್ದಿದ್ದೇನೆ. [QBR] ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, [QBR] ನಾಲಿಗೆಗಳು ಹದವಾದ ಕತ್ತಿಗಳೇ. [QBR]
5. ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; [QBR] ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. [QBR]
6. ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; [QBR] ನನ್ನ ಪ್ರಾಣವು ಕುಂದಿಹೋಯಿತು. [QBR] ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; [QBR] ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ
7. ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. [QBR] ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು. [QBR]
8. ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. [QBR] ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು. [QBR]
9. ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; [QBR] ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು. [QBR]
10. ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, [QBR] ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ. [QBR]
11. ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; [QBR] ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 57 / 150
ಕೀರ್ತನೆಗಳು 57:136
1 ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು. 2 ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು. 3 ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ಸೆಲಾ ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು. 4 ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ * ದುರಾಶೆಯಿಂದ ಕಬಳಿಸುವಂತಹ ಅಥವಾ ಬೆಂಕಿಕಾರುವ. ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ. 5 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. 6 ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ 7 ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು. 8 ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು. 9 ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು. 10 ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ. 11 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 57 / 150
Common Bible Languages
West Indian Languages
×

Alert

×

kannada Letters Keypad References